ಸರ್ಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ
ನವದೆಹಲಿ, 09 ಆಗಸ್ಟ್ (ಹಿ.ಸ.): ಆ್ಯಂಕರ್:ಪ್ರಯಾಗ್‌ರಾಜ್‌ನಲ್ಲಿ ಉದ್ಯೋಗಕ್ಕಾಗಿ ವರ್ಷಗಳ ಕಾಲ ತಯಾರಿ ನಡೆಸಿದ ವಿದ್ಯಾರ್ಥಿಯೊಬ್ಬ ತನ್ನ ಕುಟುಂಬದ ಜಮೀನು ಮಾರಾಟ ಮಾಡಿದ್ದು, ಪೋಷಕರ ಮೇಲೆ ಸಾಲವಿದ್ದರೂ ಉದ್ಯೋಗ ಸಿಗದೆ ಸಂಕಷ್ಟದಲ್ಲಿದ್ದಾನೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
कांग्रेस के पूर्व अध्यक्ष और लोकसभा में नेता प्रतिपक्ष राहुल गांधी (फाइल फोटो)।


ನವದೆಹಲಿ, 09 ಆಗಸ್ಟ್ (ಹಿ.ಸ.):

ಆ್ಯಂಕರ್:ಪ್ರಯಾಗ್‌ರಾಜ್‌ನಲ್ಲಿ ಉದ್ಯೋಗಕ್ಕಾಗಿ ವರ್ಷಗಳ ಕಾಲ ತಯಾರಿ ನಡೆಸಿದ ವಿದ್ಯಾರ್ಥಿಯೊಬ್ಬ ತನ್ನ ಕುಟುಂಬದ ಜಮೀನು ಮಾರಾಟ ಮಾಡಿದ್ದು, ಪೋಷಕರ ಮೇಲೆ ಸಾಲವಿದ್ದರೂ ಉದ್ಯೋಗ ಸಿಗದೆ ಸಂಕಷ್ಟದಲ್ಲಿದ್ದಾನೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಭಾನುವಾರ ಪ್ರತಿಕ್ರಿಯಿಸಿರುವ ಅವರು, ಇದು ಆ ವಿದ್ಯಾರ್ಥಿಯ ಸೋಲಲ್ಲ, ಯುವಕರ ಪರಿಶ್ರಮಕ್ಕೆ ಸೂಕ್ತ ಮೌಲ್ಯ ನೀಡಲು ವಿಫಲವಾದ ವ್ಯವಸ್ಥೆಯ ಸೋಲು ಎಂದು ಟೀಕಿಸಿದ್ದಾರೆ.

ವಿದ್ಯಾರ್ಥಿಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೌನ ವಹಿಸಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಂಡು 13 ದಿನಗಳು ಕಳೆದರೂ ಗೃಹ ಸಚಿವರಿಂದ ಯಾವುದೇ ಹೇಳಿಕೆ ಬಂದಿಲ್ಲ ಎಂದಿದ್ದಾರೆ.

ರಾಜಧಾನಿಯ ಬೀದಿಗಳಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಹಾಗೂ ಪ್ಯಾಲೆಟ್‌ಗಳ ಬಳಕೆ ನಡೆದಿದ್ದರೂ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ವಿಪಕ್ಷವು ಸರ್ಕಾರದಿಂದ ಉತ್ತರದಾಯಿತ್ವ ಕೇಳುವುದನ್ನು ನಿಲ್ಲಿಸುವುದಿಲ್ಲ. ಸರ್ಕಾರ ಈ ಘಟನೆಯ ಹೊಣೆಗಾರಿಕೆಯನ್ನು ವಹಿಸಲೇಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande