
ಶಿವಮೊಗ್ಗ, 09 ಆಗಸ್ಟ್ (ಹಿ.ಸ.):
ಆ್ಯಂಕರ್:ಅತಿವೃಷ್ಟಿಯಿಂದ ಉಂಟಾಗಿರುವ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ತೀರ್ಥಹಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕ್ವಿಟ್ ಇಂಡಿಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಿದರು.
ಈ ವೇಳೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ತಾಲ್ಲೂಕಿನ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಂಘಟಿತರಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದ ಸಚಿವರಿಗೆ ಪಕ್ಷದ ಕಾರ್ಯಕರ್ತರು ಆತ್ಮೀಯ ಸ್ವಾಗತ ನೀಡಿ ಅಭಿನಂದಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.