ಬಿಎಚ್ಇಎಲ್ ರಾಷ್ಟ್ರದ ಬೊಕ್ಕಸಕ್ಕೆ ಗಣನೀಯ ಕೊಡುಗೆ: ಕುಮಾರಸ್ವಾಮಿ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ (ಬಿಎಚ್‌ಇಎಲ್‌) ಸಾರ್ವಜನಿಕ ವಲಯದಲ್ಲಿ ಉತ್ತಮ ಕಾರ್ಯಕ್ಷಮತೆಯ ಮೂಲಕ ರಾಷ್ಟ್ರದ ಬೊಕ್ಕಸಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಎಕ್ಸ್‌ನಲ್ಲಿ ಮಾಹಿತಿ
Hdk


ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್‌ (ಬಿಎಚ್‌ಇಎಲ್‌) ಸಾರ್ವಜನಿಕ ವಲಯದಲ್ಲಿ ಉತ್ತಮ ಕಾರ್ಯಕ್ಷಮತೆಯ ಮೂಲಕ ರಾಷ್ಟ್ರದ ಬೊಕ್ಕಸಕ್ಕೆ ಗಣನೀಯ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 2025-26ನೇ ಹಣಕಾಸು ವರ್ಷಕ್ಕೆ ಬಿಎಚ್‌ಇಎಲ್‌ ಶೇ.70ರ ಅಂತಿಮ ಲಾಭಾಂಶವಾಗಿ ₹487.49 ಕೋಟಿ ಘೋಷಿಸಿದೆ. ಇದರಲ್ಲಿ ₹283.56 ಕೋಟಿ ಕೇಂದ್ರ ಸರ್ಕಾರಕ್ಕೆ ಸೇರಲಿದೆ. 2024-25ನೇ ಸಾಲಿಗೆ ಹೋಲಿಸಿದರೆ ಬೊಕ್ಕಸಕ್ಕೆ ಬಿಎಚ್‌ಇಎಲ್‌ನ ಕೊಡುಗೆ 2.5 ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಭಾರೀ ಕೈಗಾರಿಕೆಗಳ ಸಚಿವಾಲಯ ಹಾಗೂ ಬಿಎಚ್‌ಇಎಲ್‌ನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಾಧನೆಗಾಗಿ ಬಿಎಚ್‌ಇಎಲ್‌ ತಂಡಕ್ಕೆ ಅಭಿನಂದನೆ ಸಲ್ಲಿಸಿರುವ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಆತ್ಮನಿರ್ಭರ ಭಾರತ ಹಾಗೂ 2047ರ ವಿಕಸಿತ ಭಾರತ ನಿರ್ಮಾಣದಲ್ಲಿ ಬಿಎಚ್‌ಇಎಲ್‌ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande