ಕೇಂದ್ರದ ಭರವಸೆ ಹಿನ್ನೆಲೆಯಲ್ಲಿ ಸೆ.5ರ ದೆಹಲಿ ಚಲೋ ಹಿಂಪಡೆದ ಸಿಜೆಪಿ
ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸೆಪ್ಟೆಂಬರ್ 5ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದಿದೆ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಸಿಜೆಪಿ ವಕ್ತಾರ
सुप्रीम कोर्ट


ನವದೆಹಲಿ, 01 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸೆಪ್ಟೆಂಬರ್ 5ರಂದು ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದ ವೇಳೆ ಸಿಜೆಪಿ ವಕ್ತಾರ ಸೌರವ್ ದಾಸ್ ಪ್ರತಿಭಟನಾ ಮೆರವಣಿಗೆ ಹಿಂಪಡೆಯುವುದಾಗಿ ಘೋಷಿಸಿದರು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ, ಎರಡೂ ಪಕ್ಷಗಳು ಸಿದ್ಧರಿದ್ದರೆ ಯಾವುದೇ ವಿಚಾರಕ್ಕೂ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿತು.

ವಿರೋಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೇಂದ್ರ ಸರ್ಕಾರ ವಿಚಾರಣೆ ವೇಳೆ ಮನವಿ ಮಾಡಿತು. ಕೇಂದ್ರದ ಅರ್ಜಿಯ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ ಸೌರವ್ ದಾಸ್ ಪ್ರತಿಭಟನೆ ಹಿಂಪಡೆಯುವ ಘೋಷಣೆ ಮಾಡಿದರು.

ಸಿಜೆಪಿ ಸೆ.5ರಂದು ದೆಹಲಿಯ ಇಂಡಿಯಾ ಗೇಟ್‌ನಿಂದ ಜಯಸಿಂಗ್ ಮಾರ್ಗದಲ್ಲಿರುವ ಪೊಲೀಸ್ ಪ್ರಧಾನ ಕಚೇರಿ ಹಾಗೂ ಜಂತರ್‌ಮಂತರ್‌ ಸಮೀಪದವರೆಗೆ ಮೆರವಣಿಗೆ ನಡೆಸಲು ಕರೆ ನೀಡಿತ್ತು. ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದರು.

ಆದರೆ, ಸೆ.5ರ ಮೆರವಣಿಗೆಗೆ ಪೊಲೀಸರು ಯಾವುದೇ ಅನುಮತಿ ನೀಡಿರಲಿಲ್ಲ. ಪ್ರತಿಭಟನೆಗೆ ಅನುಮತಿ ಕೋರಿ ಸಿಜೆಪಿ ಕಡೆಯಿಂದ ಯಾವುದೇ ಅರ್ಜಿ ಸ್ವೀಕರಿಸಿಲ್ಲ ಎಂದು ಪೊಲೀಸರು ತಿಳಿಸಿದ್ದರು.

-----

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande