ದೃಢ ಕರ್ನಾಟಕದ ಸಂಕಲ್ಪ: ಹಲವು ಜನಪರ ಯೋಜನೆಗಳಿಗೆ ಚಾಲನೆ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ನೂತನ ಸರ್ಕಾರ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದರು. ಸ
ಮುಖ್ಯಮಂತ್ರಿ


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ನೂತನ ಸರ್ಕಾರ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ನಡೆದ ‘ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಲವು ಮಹತ್ವದ ಯೋಜನೆಗಳಿಗೆ ಚಾಲನೆ ನೀಡಿದರು.

ಸೇವಾ ಒನ್, ರೈತ ಚೈತನ್ಯ ಯೋಜನೆ, ಶಾಲೆಗಳಿಗೆ ಸಿ.ಎಸ್.ಆರ್. ಪೋರ್ಟಲ್, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಿಎಂಟಿಸಿ ಆ್ಯಪ್, ಒನ್ ಕರ್ನಾಟಕ ಮೊಬಿಲಿಟಿ ಆ್ಯಪ್ ಹಾಗೂ ವಾಹನಗಳಿಗೆ ಹೊರಸೂಸುವಿಕೆ ನಿಯಂತ್ರಣ ಸಾಧನ ಅಳವಡಿಸುವ ಯೋಜನೆಗಳಿಗೆ ಮುಖ್ಯಮಂತ್ರಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ನಿವೇಶನ ರಹಿತರಿಗೆ 5 ಲಕ್ಷ ನಿವೇಶನ ಹಂಚಿಕೆ ಮಾಡುವ ಯೋಜನೆ ಹಾಗೂ ಸೈನಿಕ ಸಮ್ಮಾನ ಯೋಜನೆಗೆ ಸಂಬಂಧಿಸಿದ ಆದೇಶಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹಿ ಹಾಕಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande