ಶಿವಕುಮಾರ್ ಸರ್ಕಾರಕ್ಕೆ 100 ದಿನ: ದೃಢ ಕರ್ನಾಟಕದ ಸಂಕಲ್ಪ ಕೈಪಿಡಿ ಬಿಡುಗಡೆ
ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ವಿಶೇಷ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು. ಸಂಭ್ರಮದ ಅಂಗವಾಗಿ ಸರ್ಕಾರದ 100 ದಿನಗಳ ಸ
ಕೈಪಿಡಿ ಬಿಡುಗಡೆ


ಬೆಂಗಳೂರು, 10 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಗುರುವಾರ ವಿಶೇಷ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸಲಾಯಿತು.

ಸಂಭ್ರಮದ ಅಂಗವಾಗಿ ಸರ್ಕಾರದ 100 ದಿನಗಳ ಸಾಧನೆಗಳು ಹಾಗೂ ಮುಂಬರುವ ಯೋಜನೆಗಳ ವಿವರಗಳನ್ನು ಒಳಗೊಂಡ ‘ದೃಢ ಕರ್ನಾಟಕದ ಸಂಕಲ್ಪ’ ಎಂಬ ವಿಶೇಷ ಕೈಪಿಡಿಯನ್ನು ಬಿಡುಗಡೆ ಮಾಡಲಾಯಿತು.

ಜನಪರ ಆಡಳಿತ, ಅಭಿವೃದ್ಧಿ ಕಾರ್ಯಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಕೈಪಿಡಿಯಲ್ಲಿ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಜಾರಿಗೊಳಿಸಲಿರುವ ಯೋಜನೆಗಳು ಮತ್ತು ಸರ್ಕಾರದ ಸಂಕಲ್ಪಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande