
ಬೆಂಗಳೂರು, 10 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ರಾಜ್ಯದ ವಸತಿ ರಹಿತರಿಗೆ 5 ಲಕ್ಷ ನಿವೇಶನಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.
ಇದರ ಜೊತೆಗೆ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ 50 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ತಿಳಿಸಿದ್ದಾರೆ.
ವಸತಿ ರಹಿತ ಕುಟುಂಬಗಳಿಗೆ ಸ್ವಂತ ನಿವೇಶನ ಕಲ್ಪಿಸುವ ಮೂಲಕ ಅವರಿಗೆ ಶಾಶ್ವತ ನೆಲೆ ಒದಗಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ನಿವೇಶನ ಹಂಚಿಕೆ ಪ್ರಕ್ರಿಯೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನಗಳನ್ನು ಒದಗಿಸಲಾಗುವುದು. ಜೊತೆಗೆ ನಿರುದ್ಯೋಗಿ ಯುವಕರಿಗೆ 50 ಸಾವಿರ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R