
ಕೋಲಾರ, 11 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಕೋಲಾರ ನಗರದ ರೇಷ್ಮೆ ಮಾರುಕಟ್ಟೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಕರಡು ಮತದಾರರ ಪಟ್ಟಿಯಲ್ಲಿ ಬಿಟ್ಟುಹೋಗಿರುವ ಅರ್ಹ ಮತದಾರರ ಮರು ಸೇರ್ಪಡೆ ಹಾಗೂ ಮತದಾರರ ನೋಂದಣಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಯೋಜನಾಧಿಕಾರಿಗಳಾದ ರವಿಚಂದ್ರ ಮಾತನಾಡಿ, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಕಾರ್ಯವು ಪ್ರಗತಿಯಲ್ಲಿದೆ. ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಸಂಬ0ಧಿಸಿದ ಮತದಾರರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹಕ್ಕು ಮತ್ತು ಆಕ್ಷೇಪಣೆಗಳ ಸ್ವೀಕಾರ ಕಾರ್ಯ ನಡೆಯುತ್ತಿದೆ. ಮತದಾರರ ಪಟ್ಟಿಯಿಂದ ಹೆಸರು ಬಿಟ್ಟುಹೋಗಿರುವ ಮತದಾರರಿಗೆ ಇದೇ ಸೆ.೨೩ ವರೆಗೂ ಅಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿರುವ ಅರ್ಹ ಮತದಾರರು ಹಾಗೂ ೧೮ ವರ್ಷ ಪೂರ್ಣಗೊಂಡ ಹೊಸ ಯುವ ಮತದಾರರು ತಮ್ಮ ಹೆಸರನ್ನು ಕಡ್ಡಾಯವಾಗಿ ನೊಂದಾಯಿಸಿಕೊಳ್ಳುವAತೆ ಕರೆ ನೀಡಿದರು. ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಹೊಂದಿರುವುದು ಅತ್ಯಗತ್ಯ ಎಂದು ಅವರು ತಿಳಿಸಿದರು.
ಜಾಗೃತಿ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಪಂಚಾಯತ್ನ ಯೋಜನಾ ನಿರ್ದೇಶಕರಾದ, ಮಂಜುನಾಥ್ ಸ್ವಾಮಿ, ಜಿಲ್ಲಾ ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಬ್ಬಂದಿ, ರೇಷ್ಮೆ ರೀಲರ್ಗಳು ಮತ್ತು ರೈತರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್