ಭಾರತ–ಬ್ರೆಜಿಲ್ ಬಾಂಧವ್ಯ ವೃದ್ಧಿಗೆ ಜೈಶಂಕರ್–ಮೌರೊ ವಿಯೆರಾ ಮಾತುಕತೆ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬ್ರಿಕ್ಸ್‌ ಭಾರತ 2026ರ ಕಾರ್ಯಕ್ರಮಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬ್ರೆಜಿಲ್‌ನ ವಿದೇಶಾಂಗ ಸಚಿವ ಮೌರೊ ವಿಯೆರಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಸಹಕಾರದ ಕುರಿತು ಚರ್ಚಿಸ
ಜೈಶಂಕರ್ ಎಕ್ಸನಲ್ಲಿ ಹಂಚಿಕೊಂಡಿರುವ ಪೋಟೋ


ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಬ್ರಿಕ್ಸ್‌ ಭಾರತ 2026ರ ಕಾರ್ಯಕ್ರಮಗಳು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಬ್ರೆಜಿಲ್‌ನ ವಿದೇಶಾಂಗ ಸಚಿವ ಮೌರೊ ವಿಯೆರಾ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ದ್ವಿಪಕ್ಷೀಯ ಹಾಗೂ ಬಹುಪಕ್ಷೀಯ ಸಹಕಾರದ ಕುರಿತು ಚರ್ಚಿಸಿದರು.

ಈ ಕುರಿತು ಜೈಶಂಕರ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾರತ–ಬ್ರೆಜಿಲ್ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ವ್ಯಾಪಾರ ಮತ್ತು ಹೂಡಿಕೆ, ರಕ್ಷಣಾ ಕ್ಷೇತ್ರ, ಇಂಧನ, ಕೃಷಿ ಹಾಗೂ ಬಾಹ್ಯಾಕಾಶ ಕ್ಷೇತ್ರಗಳಲ್ಲಿ ಉಭಯ ದೇಶಗಳ ನಡುವಿನ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಕುರಿತು ಚರ್ಚೆ ನಡೆಯಿತು. ವಿಶ್ವಸಂಸ್ಥೆ, ಜಿ-20 ಹಾಗೂ ಅಂತಾರಾಷ್ಟ್ರೀಯ ಸಾಗರ ಸಂಸ್ಥೆಯಂತಹ ಬಹುಪಕ್ಷೀಯ ವೇದಿಕೆಗಳಲ್ಲಿ ಭಾರತ ಮತ್ತು ಬ್ರೆಜಿಲ್ ನಡುವಿನ ಸಹಕಾರದ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಪ್ರಸ್ತುತ ಜಾಗತಿಕ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಕುರಿತು ಉಭಯ ಸಚಿವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಪ್ರಸಕ್ತ ಜಾಗತಿಕ ಸನ್ನಿವೇಶದಲ್ಲಿ ಸಂವಾದ ಮತ್ತು ರಾಜತಾಂತ್ರಿಕ ಪ್ರಯತ್ನಗಳನ್ನು ಮತ್ತಷ್ಟು ಮುಂದುವರಿಸುವಲ್ಲಿ ಬ್ರಿಕ್ಸ್‌ 2026ರ ಮಹತ್ವದ ಬಗ್ಗೆಯೂ ಚರ್ಚಿಸಲಾಯಿತು.

ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಬ್ರಿಕ್ಸ್‌ ಶೃಂಗಸಭೆ ಸೆ.12 ಮತ್ತು 13ರಂದು ನವದೆಹಲಿಯಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಸದಸ್ಯ ರಾಷ್ಟ್ರಗಳೊಂದಿಗೆ ಭಾರತ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande