ನಾಂದೇಡ್ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದ ಆಪ್ತ ವಾರಸುದಾರರಿಗೆ ತಲಾ ₹2 ಲಕ್ಷ ಹಾಗೂ ಗ
प्रधानमंत्री नरेन्द्र मोदी गुरुवार को वीडियो कॉन्फ्रेंस के माध्यम से संबोधित करते हुए


ನವದೆಹಲಿ, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬದ ಆಪ್ತ ವಾರಸುದಾರರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ದುಃಖದ ಈ ಸಂದರ್ಭದಲ್ಲಿ ತಮ್ಮ ಸಹಾನುಭೂತಿ ಶೋಕತಪ್ತ ಕುಟುಂಬಗಳೊಂದಿಗಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿರುವುದಾಗಿ ಪ್ರಧಾನಮಂತ್ರಿ ಕಚೇರಿ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಿಳಿಸಿದೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರೂ ನಾಂದೇಡ್‌ ರಸ್ತೆ ಅಪಘಾತದಲ್ಲಿ ಸಂಭವಿಸಿದ ಸಾವುಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶೋಕತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಕೂಡ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಹಾಗೂ ಈ ದುರ್ಘಟನೆಯಿಂದ ಸಂಕಷ್ಟಕ್ಕೊಳಗಾದ ಎಲ್ಲರಿಗೂ ನೋವನ್ನು ಸಹಿಸುವ ಶಕ್ತಿ ದೊರೆಯಲಿ ಎಂದು ಹಾರೈಸಿದ್ದಾರೆ.

ನಾಗಪುರ–ರಾಯಪುರ ಹೆದ್ದಾರಿಯಲ್ಲಿ ಭಂಡಾರಾ ಜಿಲ್ಲೆಯ ಸಮೀಪ ಶುಕ್ರವಾರ ಬೆಳಗ್ಗೆ ಟ್ರಕ್‌ ಮತ್ತು ಬೊಲೆರೊ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande