
ಬೆಂಗಳೂರು, 11 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಭಾರತಾಂಬೆಯ ಸೇವೆ ಮತ್ತು ರಾಷ್ಟ್ರದ ಉನ್ನತಿಗಾಗಿ ತಮ್ಮ ಬದುಕನ್ನು ಸಮರ್ಪಿಸಿಕೊಂಡಿರುವ ಡಾ. ಮೋಹನ್ ಭಾಗವತ್ ಅವರಿಗೆ ಹಾರ್ದಿಕ ಶುಭಾಶಯಗಳು ಎಂದು ಆರ್. ಅಶೋಕ ತಿಳಿಸಿದ್ದಾರೆ.
ರಾಷ್ಟ್ರದ ಸಾಂಸ್ಕೃತಿಕ ಚೇತನ, ಸಾಮಾಜಿಕ ಏಕತೆ ಮತ್ತು ರಾಷ್ಟ್ರೀಯ ಪುನರುತ್ಥಾನದ ಆಶಯಗಳನ್ನು ಬಲಪಡಿಸುವ ಅವರ ನಿರಂತರ ಪ್ರಯತ್ನಗಳು ಸ್ಫೂರ್ತಿದಾಯಕವಾಗಿವೆ. ಭಾರತ ಮಾತೆಯ ಸೇವೆಯಲ್ಲಿ ಇನ್ನಷ್ಟು ಶಕ್ತಿ, ಉತ್ತಮ ಆರೋಗ್ಯ ಹಾಗೂ ದೀರ್ಘಾಯುಷ್ಯವನ್ನು ಭಗವಂತ ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಇದೇ ವೇಳೆ ಬಿ.ವೈ. ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಶುಭಾಶಯ ಕೋರಿದ್ದು, ರಾಷ್ಟ್ರ ನಿರ್ಮಾಣ ಮತ್ತು ಸಾಮಾಜಿಕ ಏಕತೆಗಾಗಿ ಡಾ. ಮೋಹನ್ ಭಾಗವತ್ ಅವರ ಜೀವನಪರ್ಯಂತದ ಬದ್ಧತೆ ತಮ್ಮಂತಹ ದೇಶದ ಅನೇಕರಿಗೆ ಸ್ಫೂರ್ತಿಯಾಗಿದೆ ಎಂದು ತಿಳಿಸಿದ್ದಾರೆ. ಉತ್ತಮ ಆರೋಗ್ಯ, ಕ್ಷೇಮ ಹಾಗೂ ಭಾರತ ಸೇವೆಯಲ್ಲಿ ದೀರ್ಘಾಯುಷ್ಯ ದೊರೆಯಲಿ ಎಂದು ಹಾರೈಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.