ಮಹಾರಾಷ್ಟ್ರದ ಭಂಡಾರದಲ್ಲಿ ಟ್ರಕ್–ಬೊಲೆರೊ ಡಿಕ್ಕಿ: 9 ಮಂದಿ ಸಾವು, 9 ಜನರಿಗೆ ಗಾಯ
ಮುಂಬೈ, 11 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಮಹಾರಾಷ್ಟ್ರದ ಭಂಡಾರ ಜಿಲ್ಲೆ ಲಖನಿ ತಾಲ್ಲೂಕಿನ ಪಿಂಪಳಗಾಂವ್‌ ಸಮೀಪ ನಾಗಪುರ–ರಾಯಪುರ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಟ್ರಕ್‌ ಮತ್ತು ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು, ಇನ್ನೂ ಒಂಬತ್ತು ಮಂದಿ ಗ
फोटो: भंडारा सडक़ दुर्घटना की जांच कर रही पुलिस


ಮುಂಬೈ, 11 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಮಹಾರಾಷ್ಟ್ರದ ಭಂಡಾರ ಜಿಲ್ಲೆ ಲಖನಿ ತಾಲ್ಲೂಕಿನ ಪಿಂಪಳಗಾಂವ್‌ ಸಮೀಪ ನಾಗಪುರ–ರಾಯಪುರ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ಟ್ರಕ್‌ ಮತ್ತು ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದು, ಇನ್ನೂ ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಭಂಡಾರದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ನಾಗಪುರಕ್ಕೆ ಕಳುಹಿಸಲಾಗಿದೆ ಎಂದು ಹೆದ್ದಾರಿ ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಕೆಲವು ಮಹಿಳೆಯರು ಹಾಗೂ ಇತರ ಕಾರ್ಮಿಕರು ಬೊಲೆರೊ ವಾಹನದಲ್ಲಿ ನಾಗಪುರದತ್ತ ತೆರಳುತ್ತಿದ್ದರು. ಲಖನಿ ಸಮೀಪದ ಪಿಂಪಳಗಾಂವ್‌ ಪ್ರದೇಶದಲ್ಲಿ ಪೆಟ್ರೋಲ್‌ ಬಂಕ್‌ ಹಾಗೂ ಭಾವುಚಾ ಧಾಬಾ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಬೊಲೆರೊ ಏಕಾಏಕಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ. ಮೃತರಲ್ಲಿ ಆರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗಡೆಗಾಂವ್‌ನ ಹೆದ್ದಾರಿ ಪೊಲೀಸ್‌ ಪರಿಹಾರ ಕೇಂದ್ರದ ಮುಖ್ಯಸ್ಥ ರವೀಂದ್ರ ರೇವತ್ಕರ್‌ ಅವರು ಸಿಬ್ಬಂದಿ ಹಾಗೂ ಭಂಡಾರ ಪೊಲೀಸ್‌ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಧಾವಿಸಿದರು. ಸ್ಥಳೀಯರ ನೆರವಿನೊಂದಿಗೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಅಪಘಾತಕ್ಕೀಡಾದ ವಾಹನದಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.

ಮೃತರು ಹಾಗೂ ಗಾಯಾಳುಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande