ಶ್ರೀನಿವಾಸಪುರ ಕ್ಷೇತ್ರದಲ್ಲಿ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಶಾಸಕ ವೆಂಕಟಶಿವಾರೆಡ್ಡಿ ಮನವಿ
ಶ್ರೀನಿವಾಸಪುರ ಕ್ಷೇತ್ರದಲ್ಲಿ ವಸತಿಹೀನರಿಗೆ ವಸತಿ ಸೌಲಭ್ಯ ಕಲ್ಪಿಸಲು ಶಾಸಕ ವೆಂಕಟಶಿವಾರೆಡ್ಡಿ ಮನವಿ
ಶ್ರೀನಿವಾಸಪುರ ತಾಲ್ಲೂಕಿನ ರೋಣೂರಿನಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಶಾಸಕ ವೆಂಕಟಶಿವಾರೆಡ್ಡಿ ಫಲಾನುಭವಿಯೊಬ್ಬರಿಗೆ ಸರ್ಕಾರದ ಸವಲತ್ತನ್ನು ವಿತರಿಸಿದರು.


ಕೋಲಾರ, 12 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪ್ರಜಾಸೇವಾ ಆಂದೋಲನ ಸರ್ಕಾರದ ಸೇವೆಗಳನ್ನು ನೇರವಾಗಿ ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಇದಾಗಿದೆ. ಸಾರ್ವಜನಿಕರ ಪಿಂಚಣಿ, ಪಹಣಿ, ವಸತಿ ಸೇರಿದಂತೆ ಹತ್ತಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲು ಈ ಆಂದೋಲನ ವೇದಿಕೆಯಾಗಲಿದೆ. ಕ್ಷೇತ್ರದಲ್ಲಿ ಸಾಕಷ್ಟು ನಿವೇಶನ ರಹಿತ ಹಾಗೂ ವಸತಿಹೀನರಿದ್ದು, ಅವರೆಲ್ಲರಿಗೂ ಸೂರು ಕಲ್ಪಿಸಿಕೊಡುವಂತೆ ಈ ವೇದಿಕೆಯ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು

ಶ್ರೀನಿವಾಸಪುರ ತಾಲೂಕಿನ ರೋಣೂರು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ 'ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತಿ ಗ್ರಾಮದಲ್ಲೂ ನಿವೇಶನ, ವಸತಿ ಯೋಜನೆ ಹಾಗೂ ಕುಡಿಯುವ ನೀರಿನ ಸೌಲಭ್ಯಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಎಸ್.ಎಂ.ಮAಗಳ ಮಾತನಾಡಿ, ಜನರ ಬಳಿಗೇ ತೆರಳಿ ಅವರ ಕುಂದುಕೊರತೆಗಳನ್ನು ಆಲಿಸಿ ತ್ವರಿತವಾಗಿ ಪರಿಹರಿಸುವುದು ಪ್ರಜಾ ಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಬಗ್ಗೆ ಕೇವಲ ಮೌಖಿಕವಾಗಿ ಹೇಳದೆ, ಅಗತ್ಯ ದಾಖಲೆಗಳೊಂದಿಗೆ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಒಟ್ಟು ೬೮ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಜಿ.ಎನ್.ಸುದೀಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಸರ್ವೇಶ್, ತೋಟಗಾರಿಕೆ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಸಿ.ಮುನಿಲಕ್ಷ್ಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎನ್.ರಾಜೇಶ್, ಕಂದಾಯ ನಿರೀಕ್ಷಕ ಸುಬ್ರಮಣಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande