
ಬೆಂಗಳೂರು, 12 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ನಗರದ ವಸಂತನಗರದಲ್ಲಿರುವ ಇಂದಿರಾಗಾಂಧಿ ಸಂಗೀತ ಕಾರಂಜಿ ಉದ್ಯಾನದಲ್ಲಿ ನೂತನವಾಗಿ ನಿರ್ಮಿಸಿರುವ ತೆರೆದ ವ್ಯಾಯಾಮಶಾಲೆಯನ್ನು ಸಚಿವ ರಿಜ್ವಾನ್ ಅರ್ಷದ್ ಅವರು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಉದ್ಘಾಟಿಸಿದರು.
ನಗರದ ಹೃದಯಭಾಗದಲ್ಲಿರುವ ಈ ನೂತನ ಸೌಲಭ್ಯವು ಸಾರ್ವಜನಿಕರು ಆರೋಗ್ಯಕರ ಹಾಗೂ ಚಟುವಟಿಕೆಯ ಜೀವನಶೈಲಿ ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ. ವ್ಯಾಯಾಮ ಮತ್ತು ಮನರಂಜನೆಗಾಗಿ ನಾಗರಿಕರಿಗೆ ಅನುಕೂಲಕರ ಸ್ಥಳವನ್ನು ಒದಗಿಸುವ ಉದ್ದೇಶದಿಂದ ತೆರೆದ ವ್ಯಾಯಾಮಶಾಲೆ ನಿರ್ಮಿಸಲಾಗಿದೆ.
ನಾಗರಿಕರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆಗೆ ಹೆಚ್ಚಿನ ಆದ್ಯತೆ ನೀಡಲು ಹಾಗೂ ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳಲು ಈ ಸೌಲಭ್ಯ ಉತ್ತೇಜನ ನೀಡಲಿದೆ ಎಂದು ಸಚಿವ ರಿಜ್ವಾನ್ ಅರ್ಷದ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.