
ಜೋಯಿಡಾ, 12 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಆಡಳಿತವನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನದ ಅಂಗವಾಗಿ ಜೋಯಿಡಾ ತಾಲೂಕಿನ ಕುಂಬಾರವಾಡದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗಳನ್ನು ಆಲಿಸಿದರು.
ಪಹಣಿ, ಪಡಿತರ ಚೀಟಿ, ಪಿಂಚಣಿ, ಮೂಲಸೌಕರ್ಯ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ಥಳದಲ್ಲಿಯೇ ಸ್ವೀಕರಿಸಲಾಯಿತು. ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಹಾಗೂ ಜನರ ಕುಂದುಕೊರತೆಗಳಿಗೆ ಪರಿಹಾರ ಒದಗಿಸುವುದು ಜನಪರ ಆಡಳಿತದ ಪ್ರಮುಖ ಉದ್ದೇಶವಾಗಿದೆ. ಜನರಿಗಾಗಿ ಸದಾ ಕಾರ್ಯನಿರ್ವಹಿಸುವ ಆಡಳಿತ ವ್ಯವಸ್ಥೆ ರೂಪಿಸುವುದು ತಮ್ಮ ಧ್ಯೇಯವಾಗಿದೆ ಎಂದು ಶಾಸಕ ಆರ್. ದೇಶಪಾಂಡೆ ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.