
ಬೆಂಗಳೂರು, 12 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಸಾಲದ ಹೆಸರಿನಲ್ಲಿ ರೈತರಿಗೆ ಒತ್ತಡ ಹಾಗೂ ಕಿರುಕುಳ ನೀಡುವುದನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ರೈತರ ನೆಮ್ಮದಿ ಮತ್ತು ಗೌರವವನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿಗೆ ಕಡಿವಾಣ ಹಾಕಲು ಕಾನೂನು ರೂಪಿಸಿ, ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರೈತರು ಹಾಗೂ ದುರ್ಬಲ ವರ್ಗದ ಜನರಿಗೆ ಅನಗತ್ಯವಾಗಿ ಕಿರುಕುಳ ನೀಡದಂತೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ರೈತರ ಬೆನ್ನಿಗೆ ಸರ್ಕಾರವಿದೆ. ಕಾನೂನು ಮೀರಿ ರೈತರಿಗೆ ಒತ್ತಡ ಅಥವಾ ಕಿರುಕುಳ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರೈತರ ಹಿತದ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪರಮೇಶ್ವರ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.