
ಬೆಂಗಳೂರು, 12 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಸೋಮವಾರ ಬೆಂಗಳೂರು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಿಬಿಎ ಆದೇಶ ಹೊರಡಿಸಿದೆ.
ಜಿಬಿಎ ವ್ಯಾಪ್ತಿಯ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಅಂದು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಕುರಿತು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಗಣೇಶ ಚತುರ್ಥಿ ದಿನದಂದು ಸಾರ್ವಜನಿಕರು ಹಾಗೂ ಮಾಂಸ ಮಾರಾಟಗಾರರು ನಿಷೇಧದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಬಿಎ ಸೂಚಿಸಿದೆ.
ಆದೇಶ ಉಲ್ಲಂಘಿಸಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ನಡೆಸುವುದು ಕಂಡುಬಂದರೆ, ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.
ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ, ಸೌಹಾರ್ದ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನಿಯಮ ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R