ರೈತ ಹುತಾತ್ಮರ ತ್ಯಾಗ ಸ್ಮರಿಸಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ, 13 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ದಾವಣಗೆರೆ ತಾಲ್ಲೂಕಿನ ಆನಗೋಡು ಸಮೀಪದ ಉಳಪನಕಟ್ಟೆ ಕ್ರಾಸ್‌ನಲ್ಲಿರುವ ರೈತ ಹುತಾತ್ಮರ ಸಮಾಧಿ ಸ್ಥಳದಲ್ಲಿ ಆಯೋಜಿಸಿದ್ದ ದಿ. ಓಬೇನಹಳ್ಳಿ ಕಲ್ಲಿಂಗಪ್ಪ ಹಾಗೂ ದಿ. ಸಿದ್ದನೂರು ನಾಗರಾಜಾಚಾರ್ ಅವರ 34ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯಲ್ಲಿ ಸಂಸದೆ ಪ್
ಸಂಸದೆ ಪ್ರಭಾ ಮಲ್ಲಿಕಾರ್ಜುನ


ದಾವಣಗೆರೆ, 13 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ದಾವಣಗೆರೆ ತಾಲ್ಲೂಕಿನ ಆನಗೋಡು ಸಮೀಪದ ಉಳಪನಕಟ್ಟೆ ಕ್ರಾಸ್‌ನಲ್ಲಿರುವ ರೈತ ಹುತಾತ್ಮರ ಸಮಾಧಿ ಸ್ಥಳದಲ್ಲಿ ಆಯೋಜಿಸಿದ್ದ ದಿ. ಓಬೇನಹಳ್ಳಿ ಕಲ್ಲಿಂಗಪ್ಪ ಹಾಗೂ ದಿ. ಸಿದ್ದನೂರು ನಾಗರಾಜಾಚಾರ್ ಅವರ 34ನೇ ವರ್ಷದ ರೈತ ಹುತಾತ್ಮರ ದಿನಾಚರಣೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭಾಗವಹಿಸಿ, ರೈತ ಹೋರಾಟದ ಹುತಾತ್ಮರಿಗೆ ಗೌರವಪೂರ್ವಕ ನಮನ ಸಲ್ಲಿಸಿದರು.

ರೈತರ ಹಕ್ಕು, ಹಿತಾಸಕ್ತಿ ಹಾಗೂ ನ್ಯಾಯಕ್ಕಾಗಿ ನಡೆದ ಹೋರಾಟದಲ್ಲಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಓಬೇನಹಳ್ಳಿ ಕಲ್ಲಿಂಗಪ್ಪ ಹಾಗೂ ಸಿದ್ದನೂರು ನಾಗರಾಜಾಚಾರ್ ಅವರ ತ್ಯಾಗ ಮತ್ತು ಹೋರಾಟದ ಸ್ಮರಣೆ ಸದಾ ಉಳಿಯಲಿದೆ ಎಂದು ಅವರು ಹೇಳಿದರು.

ರೈತ ಹುತಾತ್ಮರ ಬಲಿದಾನವು ರೈತ ಸಮುದಾಯದ ಹಕ್ಕುಗಳ ರಕ್ಷಣೆಯ ಮಹತ್ವವನ್ನು ಮುಂದಿನ ಪೀಳಿಗೆಗೂ ಸಾರುವ ಪ್ರೇರಣೆಯಾಗಿದೆ. ಅನ್ನದಾತರ ಬದುಕು ಹಸನಾಗಬೇಕು, ಅವರ ಶ್ರಮಕ್ಕೆ ನ್ಯಾಯಯುತ ಪ್ರತಿಫಲ ದೊರೆಯಬೇಕು ಹಾಗೂ ಕೃಷಿ ಕ್ಷೇತ್ರ ಮತ್ತಷ್ಟು ಸದೃಢವಾಗಬೇಕು ಎಂಬುದು ಎಲ್ಲರ ಆಶಯವಾಗಿದೆ ಎಂದು ತಿಳಿಸಿದರು.

ರೈತರ ಸಮಸ್ಯೆಗಳಿಗೆ ಧ್ವನಿಯಾಗಿ, ಅವರ ಹಕ್ಕು ಮತ್ತು ಹಿತಾಸಕ್ತಿಗಳ ರಕ್ಷಣೆಗೆ ಸದಾ ಬದ್ಧರಾಗಿರಬೇಕು ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ ಕರೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande