ಮಳೆ-ಬೆಳೆ ಸಮೃದ್ಧಿಗಾಗಿ ಶಾಸಕ ಗೋಪಾಲಯ್ಯ ಪ್ರಾರ್ಥನೆ
ಗೋಪಾಲಯ್ಯ ಪ್ರಾರ್ಥನೆ
Bengaluru Press Club Gauri-Ganesha Festival MLA K Gopalaiah Prays for Good Rain and Crop Yield


ಬೆಂಗಳೂರು, 14 ಸೆಪ್ಟೆಂಬರ್(ಹಿ.ಸ.)

ಆ್ಯಂಕರ್:

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗೌರಿ–ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಕೆ. ಗೋಪಾಲಯ್ಯ ಭಾಗವಹಿಸಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಡಿನಲ್ಲಿ ಉತ್ತಮ ಮಳೆಯಾಗಿ, ರೈತರಿಗೆ ಉತ್ತಮ ಬೆಳೆ ದೊರೆಯಬೇಕು ಹಾಗೂ ರಾಜ್ಯದ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ಲಭಿಸಬೇಕು ಎಂದು ಅವರು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ಗೋಪಾಲಯ್ಯ, “ಗಣೇಶನ ಕೃಪೆಯಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ, ರೈತರಿಗೆ ಸಮೃದ್ಧ ಬೆಳೆ ದೊರೆಯಲಿ. ಜನರ ಬದುಕಿನಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ನೆಲೆಸಲಿ ಎಂಬುದು ನಮ್ಮ ಪ್ರಾರ್ಥನೆ” ಎಂದು ಹೇಳಿದರು.

ಪ್ರೆಸ್ ಕ್ಲಬ್‌ ಪದಾಧಿಕಾರಿಗಳು, ಪತ್ರಕರ್ತರು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗೌರಿ–ಗಣೇಶ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande