ಕಬ್ಬು ತುಂಬಿದ ಟ್ರ್ಯಾಕ್ಟರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು
ಪಾದಚಾರಿ ಸ್ಥಳದಲ್ಲೇ ಸಾವು
Mandya-KR-Pet-Tractor-Accident-Pedestrian-Killed-Driver-Escapes


ಮಂಡ್ಯ, 14 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೇಮಗಿರಿ ರಸ್ತೆಯ ಸಾಧುಗೋನಹಳ್ಳಿ ಬಳಿ ನಡೆದಿದೆ.

ಮೃತ ವ್ಯಕ್ತಿಯ ಗುರುತು ಹಾಗೂ ವಿಳಾಸ ಈವರೆಗೆ ಪತ್ತೆಯಾಗಿಲ್ಲ. ಘಟನೆ ಸಂಭವಿಸುತ್ತಿದ್ದಂತೆ ಟ್ರ್ಯಾಕ್ಟರ್ ಅನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಬಲ್ ಟ್ರ್ಯಾಲಿ ಮೂಲಕ ಕಬ್ಬನ್ನು ಸಕ್ಕರೆ ಕಾರ್ಖಾನೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಪಾದಚಾರಿಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಕೆ.ಆರ್.ಪೇಟೆ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಹಾಗೂ ಪರಾರಿಯಾಗಿರುವ ಟ್ರ್ಯಾಕ್ಟರ್ ಚಾಲಕನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಈ ಸಂಬಂಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande