ಸೆ.17ರಂದು ಬಳ್ಳಾರಿ ಜೆಸ್ಕಾಂ ಉಪ-ವಿಭಾಗ 1 ವಿದ್ಯುತ್ ಗ್ರಾಹಕರ ಸಭೆ
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬಳ್ಳಾರಿ ನಗರದ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯಿರುವ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾ
ಸೆ.17ರಂದು ಬಳ್ಳಾರಿ ಜೆಸ್ಕಾಂ ಉಪ-ವಿಭಾಗ 1 ವಿದ್ಯುತ್ ಗ್ರಾಹಕರ ಸಭೆ


ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಬಳ್ಳಾರಿ ನಗರದ ಜೆಸ್ಕಾಂ ಉಪ-ವಿಭಾಗ 1 ಮತ್ತು 2ರ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯಿರುವ ಜೆಸ್ಕಾಂ ವಲಯ ಕಚೇರಿಯ ಮೊದಲ ಮಹಡಿಯ ಸಭಾಂಗಣದಲ್ಲಿ ವಿದ್ಯುತ್ ಗ್ರಾಹಕರ ಕುಂದು-ಕೊರತೆ ಸಭೆ ಆಯೋಜಿಸಲಾಗಿದೆ.

ಜೆಸ್ಕಾಂ ನಗರ ವಿಭಾಗದ (ಕಾರ್ಯ ಮತ್ತು ಪಾಲನೆ) ಕಾರ್ಯನಿರ್ವಾಹಕ ಅಭಿಯಂತರರು (ಇಇ) ಅಧ್ಯಕ್ಷತೆ ವಹಿಸುವರು. ಬಳ್ಳಾರಿ ನಗರದ ಜೆಸ್ಕಾಂ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಈ ಸಭೆಯಲ್ಲಿ ಭಾಗವಹಿಸಿ ವಿದ್ಯುತ್ ಹಾಗೂ ಇತರೆ ತಾಂತ್ರಿಕ ಸಮಸ್ಯೆಗಳಿಗೆ ಸಂಬ0ಧಿಸಿದ ತಮ್ಮ ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande