ಗಣೇಶೋತ್ಸವದಲ್ಲೂ ಬಿಜೆಪಿ ರಾಜಕಾರಣ: ಚಲುವರಾಯಸ್ವಾಮಿ
ಮಂಡ್ಯ, 15 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬರ ಪರಿಸ್ಥಿತಿ ಕುರಿತು ಚರ್ಚಿಸಲು ವಿಧಾನಸಭೆ ವಿಶೇಷ ಅಧಿವೇಶನ ಕರೆಯಲಾಗಿದ್ದರೂ, ಬಿಜೆಪಿ ನಾಯಕರು ಗಣೇಶೋತ್ಸವದ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ನಾಳೆ ಮದ್ದೂರಿನಲ್ಲ
ಗಣೇಶೋತ್ಸವದಲ್ಲೂ ಬಿಜೆಪಿ ರಾಜಕಾರಣ: ಚಲುವರಾಯಸ್ವಾಮಿ


ಮಂಡ್ಯ, 15 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಬರ ಪರಿಸ್ಥಿತಿ ಕುರಿತು ಚರ್ಚಿಸಲು ವಿಧಾನಸಭೆ ವಿಶೇಷ ಅಧಿವೇಶನ ಕರೆಯಲಾಗಿದ್ದರೂ, ಬಿಜೆಪಿ ನಾಯಕರು ಗಣೇಶೋತ್ಸವದ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ನಾಳೆ ಮದ್ದೂರಿನಲ್ಲಿ ನಡೆಯಲಿರುವ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.

“ಬರ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಲು ಅಧಿವೇಶನ ಕರೆದರೆ ಗಣಪತಿ ಮೆರವಣಿಗೆ ಮಾಡುತ್ತಿದ್ದಾರೆ. ಗಣಪತಿಯನ್ನು ನಮ್ಮ ಊರಿನವರೇ ಮಾಡುತ್ತಾರೆ.

ಬಿಜೆಪಿ ನಾಯಕರನ್ನು ಕರೆಯುತ್ತಾರಾ? ರಾಜಕಾರಣ ಮಾಡಲು ಬಿಜೆಪಿಗೆ ಬೇರೆ ವಿಷಯ ಇಲ್ಲ. ಇಂತಹ ವಿಷಯಗಳನ್ನು ಹುಡುಕಿಕೊಂಡು ರಾಜಕೀಯ ಮಾಡುತ್ತಾರೆ” ಎಂದು ಚಲುವರಾಯಸ್ವಾಮಿ ಹೇಳಿದರು.

ಜಿಲ್ಲಾಡಳಿತವು ಗಣೇಶ ವಿಸರ್ಜನೆಗೆ ಅಗತ್ಯ ವ್ಯವಸ್ಥೆ ಮಾಡಲಿದೆ. ಎಲ್ಲರಿಗೂ ಸೂಕ್ತ ರಕ್ಷಣೆ ಒದಗಿಸಿ ಗಣೇಶ ವಿಸರ್ಜನೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದರು.

“ನಮ್ಮ ಜಿಲ್ಲೆಯ ಜನರಿಗೆ ಗಣೇಶನನ್ನು ಹೇಗೆ ವಿಸರ್ಜನೆ ಮಾಡಬೇಕು ಎಂಬುದು ಗೊತ್ತಿದೆ. ಮಾತನಾಡಲು ಬೇರೆ ವಿಷಯವಿಲ್ಲದ ಕಾರಣ ಬಿಜೆಪಿ ಇಲ್ಲಿ ರಾಜಕೀಯ ಮಾಡುತ್ತಿದೆ. ರಾಜಕಾರಣ ಮಾಡಲಿ, ಬಿಡಿ; ಅದೇ ಕೆಲಸ ಅವರಿಗೆ” ಎಂದು ಸಚಿವರು ತಿರುಗೇಟು ನೀಡಿದರು.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮಕ್ಕೆ ಆಗಮಿಸುವ ಬಿಜೆಪಿ ನಾಯಕರಿಗೂ ಸೂಕ್ತ ಪೊಲೀಸ್ ಭದ್ರತೆ ಒದಗಿಸಲಾಗುವುದು.

ಕಾರ್ಯಕ್ರಮದ ಬಳಿಕ ಅವರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸಲಾಗುವುದು ಎಂದು ಚಲುವರಾಯಸ್ವಾಮಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande