
ಬೆಂಗಳೂರು, 15 ಸೆಪ್ಟೆಂಬರ್(ಹಿ.ಸ.)
ಆ್ಯಂಕರ್:
ಮಸೀದಿ ಇರುವ ರಸ್ತೆಯಲ್ಲಿ ಗಣೇಶ ಮೆರವಣಿಗೆ ನಡೆಸದಂತೆ ಪೊಲೀಸರು ಸೂಚಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮೆರವಣಿಗೆ ವೇಳೆ ಯಾವುದೇ ರೀತಿಯ ಗೊಂದಲ ಅಥವಾ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗದಂತೆ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
“ಮಸೀದಿ ರಸ್ತೆಯಲ್ಲಿ ಮೆರವಣಿಗೆ ಬೇಡ ಎಂದು ಪೊಲೀಸರು ಹೇಳಿದ್ದರಲ್ಲಿ ತಪ್ಪೇನಿದೆ?” ಎಂದು ಸಿಎಂ ಪ್ರಶ್ನಿಸಿದ್ದಾರೆ.
ಎಲ್ಲ ಧರ್ಮಗಳ ಆಚರಣೆಗಳು ಶಾಂತಿಯುತವಾಗಿ ನಡೆಯಬೇಕು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರ ಜವಾಬ್ದಾರಿ.
ಈ ಹಿನ್ನೆಲೆಯಲ್ಲಿ ಪೊಲೀಸರು ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಮೆರವಣಿಗೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R