
ಕುರುಗೋಡು, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯ ಗೆಣಿಕೆಹಾಳ್ ಗ್ರಾಮದ ವಿ.ಶಶಿಕಲ ಎನ್ನುವ 25 ವರ್ಷದ ಮಹಿಳೆಯು ಕುರುಗೋಡಿನ ಆಟೋ ಸ್ಟಾö್ಯಂಡ್ ನಿಂದ ಸೆ.12 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೇಲಿನ ತುಟಿಯಲ್ಲಿ ಕಪ್ಪು ಬಣ್ಣದ ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬ್ರೌನ್ ಬಣ್ಣದ ಚೂಡಿದಾರ್ ಮತ್ತು ಬಿಳಿ ಬಣ್ಣದ ಪ್ಯಾಂಟ್ (ಲೆಗ್ಗಿನ್ಸ್) ಧರಿಸಿರುತ್ತಾಳೆ.
ಕನ್ನಡ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ದೂ.08392-263433, ಮೊ.9480803051 ಅಥವಾ ಸಿಪಿಐ ಮೊ.9480803039 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್