
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಸಭಿಕರೊಂದಿಗೆ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿದರು.
ನಂತರ ಯುವ ಸಂಸತ್ ಸಭೆ ಕಾರ್ಯಕ್ರಮದ ಲಾಂಛನವನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ, ರಿಜ್ವಾನ್ ಅರ್ಷದ್, ಮಾಜಿ ಸಚಿವ ಹಾಗೂ ಶಾಸಕ ಎಚ್.ಸಿ.ಮಹದೇವಪ್ಪ, ಪಿ.ಟಿ.ಪರಮೇಶ್ವರ ನಾಯಕ್, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಮೆಹ್ರೂಸ್ ಖಾನ್, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಕರ್ನಾಟಕ ಪರಿಶಿಷ್ಟ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಭೋವಿ ನಿಗಮದ ಅಧ್ಯಕ್ಷ ಎಂ.ರಾಮಪ್ಪ, ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.