ಪ್ರಜಾಪ್ರಭುತ್ವದ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಸಿದ್ದರಾಮಯ್ಯ
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ರೂಪುಗೊಳ್ಳುವ ಹಿಂದೆ ಶತಮಾನಗಳ ಹೋರಾಟ, ಲಕ್ಷಾಂತರ ಜೀವಗಳ ತ್ಯಾಗ ಮತ್ತು ಬಲಿದಾನವಿದೆ. ಅವರ ನಿಸ್ವಾರ್ಥ ಹಾಗೂ ಸಂಘರ್ಷದ ಬದುಕು ವ್ಯರ್ಥವಾಗದಂತೆ ಭವ್ಯ ಭಾರತ ಕಟ್ಟುವುದು ಪ್ರತಿಯೊಬ್ಬರ ಜವಾಬ್ದಾ
ಸಿದ್ದರಾಮಯ್ಯ ಎಕ್ಸ್ ಪೋಸ್ಟ್


ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ರೂಪುಗೊಳ್ಳುವ ಹಿಂದೆ ಶತಮಾನಗಳ ಹೋರಾಟ, ಲಕ್ಷಾಂತರ ಜೀವಗಳ ತ್ಯಾಗ ಮತ್ತು ಬಲಿದಾನವಿದೆ. ಅವರ ನಿಸ್ವಾರ್ಥ ಹಾಗೂ ಸಂಘರ್ಷದ ಬದುಕು ವ್ಯರ್ಥವಾಗದಂತೆ ಭವ್ಯ ಭಾರತ ಕಟ್ಟುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ. ಅದು ಮಾನವೀಯ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ಜಾತಿ, ಲಿಂಗ ಮತ್ತು ಧರ್ಮದ ಆಧಾರದಲ್ಲಿ ತಾರತಮ್ಯ ಇರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರೆ ಮಾತ್ರ ಸ್ವಾತಂತ್ರ್ಯ, ಸಮಾನತೆ ಮತ್ತು ಘನತೆಯ ಬದುಕು ಸಾಧ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

ನಮ್ಮೊಳಗಿನ ಎಲ್ಲ ವೈರುಧ್ಯಗಳನ್ನು ಬದಿಗೊತ್ತಿ, ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು ಹಾಗೂ ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸೋಣ ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಾಡಿನ ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳನ್ನು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande