
ಬಳ್ಳಾರಿ, 15 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಗ್ರಾಮದ ನಿವಾಸಿ ಗವಿಸಿದ್ದೇಶ ಎನ್ನುವ 24 ವರ್ಷದ ಯುವಕ ನಗರದ 6ನೇ ಕ್ರಾಸ್, ಸತ್ಯನಾರಾಯಣಪೇಟೆಯಲ್ಲಿ ವಾಸವಾಗಿದ್ದು, ಸೆ.09 ರಂದು ಕೆಲಸಕ್ಕೆ ಹೋಗಿ ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5.5 ಅಡಿ, ಗೋಧಿ ಮೈಬಣ್ಣ, ದುಂಡು ಮುಖ ಹಾಗೂ ಧೃಡವಾದ ಮೈಕಟ್ಟು ಹೊಂದಿದ್ದು, ಬಲಗೈ ಮೇಲೆ ಇಂಗ್ಲೀಷ್ ಭಾಷೆಯಲ್ಲಿ ಪಿ ಮತ್ತು ಜಿ ಎಂದು ಅಚ್ಚೆ ಹಾಕಿಸಿಕೊಂಡಿರುತ್ತಾನೆ. ಹೋಗುವಾಗ ನೆರಳೆ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆ ದೂ: 08392-250033, ಮೊ:9480803096, ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ:08392-258100 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್