
ಬೆಂಗಳೂರು, 15 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ನಗರದ ಕೆ.ಆರ್. ವೃತ್ತದಲ್ಲಿ ಕರ್ನಾಟಕ ಎಂಜಿನಿಯರ್‌ಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಎಂಜಿನಿಯರ್‌ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾಗವಹಿಸಿ, ಶ್ರೇಷ್ಠ ಎಂಜಿನಿಯರ್ ಹಾಗೂ ಭಾರತದ ಹೆಮ್ಮೆಯ ಪುತ್ರ ಸರ್ ಎಂ. ವಿಶ್ವೇಶ್ವರಯ್ಯ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ನಾಡಿನ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಕೊಡುಗೆ ಅಪಾರವಾಗಿದೆ. ಸೇತುವೆ, ರಸ್ತೆ, ನೀರಾವರಿ, ಕೈಗಾರಿಕೆ ಹಾಗೂ ನಗರಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎಂಜಿನಿಯರ್‌ಗಳ ಜ್ಞಾನ, ಪರಿಶ್ರಮ ಮತ್ತು ದೂರದೃಷ್ಟಿ ದೇಶದ ಪ್ರಗತಿಗೆ ಭದ್ರ ಬುನಾದಿಯಾಗಿವೆ.
ಸಮಾಜದ ಅಭಿವೃದ್ಧಿ ಹಾಗೂ ಮೂಲಸೌಕರ್ಯ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಮಹತ್ವದ್ದಾಗಿದ್ದು, ಅವರ ತಾಂತ್ರಿಕ ಜ್ಞಾನ ಮತ್ತು ಸೇವೆಯಿಂದ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯುತ್ತಿದೆ ಎಂದು ಮುಖ್ಯಮಂತ್ರಿ ಎಕ್ಸನಲ್ಲಿ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.