2028ರ ಚುನಾವಣೆ ಗುರಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಹೈಕಮಾಂಡ್ ಮಾರ್ಗದರ್ಶನ
2028ರ ಚುನಾವಣೆ ಗುರಿ
2028-karnataka-elections-new-district-congress-presidents-dk-shivakumar-guidance


ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:

2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸಂಘಟನೆ ಬಲಪಡಿಸುವತ್ತ ಗಮನ ಹರಿಸಿದೆ.

ನೂತನವಾಗಿ ನೇಮಕಗೊಂಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆ ಕುರಿತು ಕೇಂದ್ರದ ನಾಯಕರು ಮಾರ್ಗದರ್ಶನ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆಗಮಿಸಿರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನೂತನ ಜಿಲ್ಲಾ ಅಧ್ಯಕ್ಷರಿಗಾಗಿ ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಸವಾಲುಗಳು ಹಾಗೂ ಚುನಾವಣಾ ಕಾರ್ಯತಂತ್ರದ ಕುರಿತು ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

2028ರ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿದ್ದರೂ, ಜಿಲ್ಲಾಮಟ್ಟದಲ್ಲಿ ಸಂಘಟನೆ ಬಲಪಡಿಸುವ ಪ್ರಕ್ರಿಯೆ ಆರಂಭವಾಗಿದೆ.

ಜಿಲ್ಲಾ ಅಧ್ಯಕ್ಷರು ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಸಂಘಟನೆಗಳೊಂದಿಗೆ ಸಮನ್ವಯ ಸಾಧಿಸಿ ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವ ನಿರೀಕ್ಷೆಯಿದೆ.

ಇದೇ ವೇಳೆ, ಯುವಕರಲ್ಲಿ ನಾಯಕತ್ವ ಬೆಳೆಸುವ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. “ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕ” ಎಂದು ಅವರು ತಿಳಿಸಿದರು.

ಶಾಲಾ-ಕಾಲೇಜುಗಳಲ್ಲಿ ಮಾದರಿ ಸಂಸತ್ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಯುವಜನರಲ್ಲಿ ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶವಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande