
ಹುಬ್ಬಳ್ಳಿ, 16 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಸಮೀಪದ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ವಿಘ್ನವಿನಾಶಕ ಶ್ರೀ ಗಣೇಶನಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ಬುಧವಾರ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಯುವ ಮುಖಂಡ ಭರತ ಬೊಮ್ಮಾಯಿ, ಮುಖಂಡರಾದ ಗೋವರ್ಧನ ರಾವ್, ಗೌತಮ್ ಭಾಫಣಾ, ಬಸವರಾಜ ಕುಂದಗೋಳಮಠ, ಮಂಜುನಾಥ ಉಡುಪಿ, ರವಿ ದಂಡಿನ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶನ ದರ್ಶನ ಪಡೆದು ಆಶೀರ್ವಾದ ಪಡೆದಿದ್ದೇನೆ. ನಾಡಿನ ಜನತೆಗೆ ವಿಘ್ನವಿನಾಶಕ ಗಣೇಶನು ಸುಖ, ಶಾಂತಿ, ಸಮೃದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸಲಿ” ಎಂದು ಬಸವರಾಜ ಬೊಮ್ಮಾಯಿ ಅವರು ಹಾರೈಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R