ಮಳೆಗೆ ಕೆಸರುಗದ್ದೆಯಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್; ವಾಹನ ಸವಾರರ ಪರದಾಟ
ವಾಹನ ಸವಾರರ ಪರದಾಟ
ಮಳೆಗೆ ಕೆಸರುಗದ್ದೆಯಾದ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್; ವಾಹನ ಸವಾರರ ಪರದಾಟ


ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ನಗರದಲ್ಲಿ ಸುರಿದ ಮಳೆಯಿಂದಾಗಿ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಸುತ್ತಮುತ್ತ ಕೆಸರು ಹಾಗೂ ಕೊಚ್ಚೆ ನೀರು ಆವರಿಸಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಫ್ಲೈಓವರ್ ಕೆಳಭಾಗ ಹಾಗೂ ಸಂಪರ್ಕ ರಸ್ತೆಗಳ ಕೆಲವೆಡೆ ಮಳೆನೀರು ನಿಂತು, ಕೆಸರು ತುಂಬಿಕೊಂಡಿರುವ ದೃಶ್ಯಗಳು ಕಂಡುಬಂದಿವೆ. ಇದರಿಂದ ವಾಹನಗಳ ಸಂಚಾರಕ್ಕೂ ತೊಂದರೆಯಾಗಿದ್ದು, ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆನೀರು ಸರಾಗವಾಗಿ ಹರಿದುಹೋಗಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ರಸ್ತೆಯಲ್ಲಿ ಸಂಗ್ರಹವಾಗಿರುವ ಕೆಸರು ಹಾಗೂ ಕೊಚ್ಚೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಳೆ ಬಂದಾಗಲೆಲ್ಲಾ ನಗರದಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯ ಸಮಸ್ಯೆಗಳು ಮುನ್ನೆಲೆಗೆ ಬರುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತ ಪರಿಹಾರ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande