ಮಾಸ್ಟರ್ ಪ್ಲಾನ್ ಉಲ್ಲಂಘಿಸಿ ರಸ್ತೆ ನಿರ್ಮಿಸಿದರೆ ಪಿಡಿಒಗಳ ವಿರುದ್ಧ ಕ್ರಮ: ಕೃಷ್ಣ ಬೈರೇಗೌಡ
ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರ್ಲಕ್ಷ್ಯಕೃಷ್ಣ ಬೈರೇಗೌಡ
Krishna-Baire-Gowda-questions-officials-over-development-works-and-waste-management


ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್ಡಿಎ) ವ್ಯಾಪ್ತಿಯಲ್ಲಿ ಮಾಸ್ಟರ್ ಪ್ಲಾನ್ಗೆ ವಿರುದ್ಧವಾಗಿ ರಸ್ತೆ ನಿರ್ಮಾಣ ಮಾಡಿದರೆ ಸಂಬಂಧಿಸಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಬಿಎಂಆರ್ಡಿಎ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ರಸ್ತೆ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ನಿಗದಿತ ಮಾಸ್ಟರ್ ಪ್ಲಾನ್ ಹಾಗೂ ಯೋಜನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಮಾಸ್ಟರ್ ಪ್ಲಾನ್ನಲ್ಲಿ ನಿಗದಿಪಡಿಸಿರುವ ಮಾರ್ಗ ಹಾಗೂ ಯೋಜನೆಗಳಿಗೆ ವಿರುದ್ಧವಾಗಿ ರಸ್ತೆ ನಿರ್ಮಾಣವಾಗುತ್ತಿರುವ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ನಿಯಮ ಉಲ್ಲಂಘಿಸಿ ಕಾಮಗಾರಿ ನಡೆಸಿದರೆ ಸಂಬಂಧಿಸಿದ ಅಧಿಕಾರಿಗಳ ಜವಾಬ್ದಾರಿ ನಿಗದಿಪಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದ್ದು, ಸ್ಥಳೀಯ ಮಟ್ಟದಲ್ಲಿ ಕೈಗೊಳ್ಳುವ ಕಾಮಗಾರಿಗಳು ಭವಿಷ್ಯದ ನಗರಾಭಿವೃದ್ಧಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande