ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾದ ಮರಾಠ ಸಮಾಜದ ಯುವಕರು
ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಮರಾಠ ಸಮಾಜದ ಶ್ರೀ ಗಜಾನನ್ ತರುಣ್ ಮಂಡಳ, ಶಿವಾಜಿ ಪೇಟೆ, ಡೊಬಳೆ ಗಲ್ಲಿ, ವಿಜಯಪುರ ಇವರ ವತಿಯಿಂದ ನಗರದ ಭಗತ್ ಸಿಂಗ್ ರೋಡ್ ಸಮೀಪ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮ
ಪರಿಸರ


ವಿಜಯಪುರ, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಮರಾಠ ಸಮಾಜದ ಶ್ರೀ ಗಜಾನನ್ ತರುಣ್ ಮಂಡಳ, ಶಿವಾಜಿ ಪೇಟೆ, ಡೊಬಳೆ ಗಲ್ಲಿ, ವಿಜಯಪುರ ಇವರ ವತಿಯಿಂದ ನಗರದ ಭಗತ್ ಸಿಂಗ್ ರೋಡ್ ಸಮೀಪ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮಂಡಳಿಯ ಪದಾಧಿಕಾರಿಗಳು ಹಾಗೂ ಎಲ್ಲ ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ನಗರ ಪ್ರದೇಶಗಳಲ್ಲಿ ಹಸಿರು ವಾತಾವರಣ ಹೆಚ್ಚಿಸುವುದು, ಪರಿಸರ ಸಮತೋಲನ ಕಾಪಾಡುವುದು ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿಕೊಡುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯವೆಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಾಲಿಕೆ ಸದಸ್ಯ ರಾಹುಲ್ ಜಡವ, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಕೇವಲ ಸಸಿ ನೆಡುವುದಷ್ಟೇ ಅಲ್ಲದೆ, ನೆಟ್ಟ ಸಸಿಗಳನ್ನು ನಿರಂತರವಾಗಿ ಸಂರಕ್ಷಿಸಿ ಅವುಗಳು ಮರಗಳಾಗಿ ಬೆಳೆಸುವ ಹೊಣೆಗಾರಿಕೆಯೂ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ನಗರದಲ್ಲಿ ಹೆಚ್ಚುತ್ತಿರುವ ಮಾಲಿನ್ಯ, ಬಿಸಿಲಿನ ತೀವ್ರತೆ ಹಾಗೂ ಪರಿಸರದ ಮೇಲಿನ ಒತ್ತಡದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡ-ಮರಗಳನ್ನು ಬೆಳೆಸುವ ಅಗತ್ಯವಿದೆ. ಯುವಕರು ಹಾಗೂ ವಿವಿಧ ಸಂಘ-ಸಂಸ್ಥೆಗಳು ಪರಿಸರ ಸಂರಕ್ಷಣಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡರೆ ನಗರದ ಹಸಿರು ವಿಸ್ತೀರ್ಣವನ್ನು ಮತ್ತಷ್ಟು ಹೆಚ್ಚಿಸಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದರು.

ಮರಾಠ ಸಮಾಜದ ಶ್ರೀ ಗಜಾನನ್ ತರುಣ್ ಮಂಡಳದ ಕಾರ್ಯಕರ್ತರು ಸಾಮಾಜಿಕ ಕಳಕಳಿಯೊಂದಿಗೆ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಜನಪರ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ಮುಂದುವರಿಸುವಂತೆ ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಂಡಳಿಯ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಸ್ಥಳೀಯರು ಭಾಗವಹಿಸಿ ಸಸಿ ನೆಡುವ ಕಾರ್ಯಕ್ಕೆ ಕೈಜೋಡಿಸಿದರು. ಪರಿಸರ ಸಂರಕ್ಷಣೆಯ ಜೊತೆಗೆ ನಗರದ ವಿವಿಧ ಬಡಾವಣೆಗಳಲ್ಲಿ ಹಸಿರು ವಾತಾವರಣ ನಿರ್ಮಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande