
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ನೂತನವಾಗಿ ನೇಮಕಗೊಂಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಮಾರ್ಗದರ್ಶನ ನೀಡಲು ಹೈಕಮಾಂಡ್ ನಾಯಕರು ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಆಗಮಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಈ ಮಾಹಿತಿ ನೀಡಿದರು.
ಇದೇ ವೇಳೆ, ಗುರುವಾರದಿಂದ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳ ಪ್ರವಾಸ ಕೈಗೊಳ್ಳುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಇಂದಿನಿಂದಲೇ ಕಲಬುರಗಿ, ಮಂಗಳೂರು, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದರು.
ವಿಧಾನಮಂಡಲ ಅಧಿವೇಶನದಲ್ಲಿ ಬರಗಾಲ ಹಾಗೂ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.