ಮೋದಿ ಅವರ 25 ವರ್ಷದ ಸಾರ್ವಜನಿಕ ಬದುಕು ಸೇವೆಯ ಪಯಣ: ರಾಜನಾಥ್ ಸಿಂಗ್
ಕೋಲ್ಕತ್ತಾ, 16 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಬದುಕು ‘ಸೇವೆ’ಯ ಪಯಣವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಮುಖ್ಯಮಂತ್ರಿಯಾಗಿ ನರ
मंच पर रक्षा मंत्री राजनाथ सिंह एवं मुख्यमंत्री शुभेंदु अधिकारी सहित अन्य अधिकारीगण


ಕೋಲ್ಕತ್ತಾ, 16 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಬದುಕು ‘ಸೇವೆ’ಯ ಪಯಣವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿ ಅವರ 13 ವರ್ಷಗಳ ಆಡಳಿತ ಹಾಗೂ ಪ್ರಧಾನಿಯಾಗಿ 12 ವರ್ಷಗಳ ಅವಧಿಯನ್ನು ಉಲ್ಲೇಖಿಸಿದರು. ಸೆ.17ರಂದು ಮೋದಿ ಅವರ ಜನ್ಮದಿನವಾಗಿದ್ದು, ಅ.7ರಂದು ಸರ್ಕಾರದ ಮುಖ್ಯಸ್ಥರಾಗಿ ಅವರು 25 ವರ್ಷ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು.

ಈ 25 ವರ್ಷಗಳ ಪಯಣವನ್ನು ಒಂದೇ ಪದದಲ್ಲಿ ವಿವರಿಸುವುದಾದರೆ ಅದು ‘ಸೇವೆ’ ಎಂದು ರಾಜನಾಥ್ ಸಿಂಗ್ ಹೇಳಿದರು. ಈ ಅವಧಿಯಲ್ಲಿ ದೇಶದ ರಾಜಕೀಯದ ಜತೆಗೆ ಅಭಿವೃದ್ಧಿ, ಉತ್ತಮ ಆಡಳಿತ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನಮಾನದಲ್ಲೂ ಬದಲಾವಣೆಗಳಾಗಿವೆ ಎಂದು ಅವರು ಹೇಳಿದರು.

ಮೋದಿ ಅವರ ಆರ್ಥಿಕ ನೀತಿಗಳನ್ನು ‘ಮೋದಿನಾಮಿಕ್ಸ್’ ಎಂದು ಉಲ್ಲೇಖಿಸಿದ ರಾಜನಾಥ್ ಸಿಂಗ್, 2014ಕ್ಕೂ ಮುನ್ನ ಭಾರತದಲ್ಲಿ ಪ್ರತಿಭೆ ಮತ್ತು ಮಾನವ ಸಂಪನ್ಮೂಲದ ಕೊರತೆ ಇರಲಿಲ್ಲ. ಆದರೆ ಅವುಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಮೋದಿ ಅವರು ಪ್ರತಿಭೆ ಹಾಗೂ ಮಾನವ ಸಂಪನ್ಮೂಲಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೊಡುಗೆ ನೀಡಲು ಸಾಧ್ಯವಾಗುವಂತಹ ವ್ಯವಸ್ಥೆಯನ್ನು ರೂಪಿಸಿದ್ದಾರೆ ಎಂದು ಹೇಳಿದರು.

ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ನೇರವಾಗಿ ಅರ್ಹರಿಗೆ ತಲುಪಿಸುವ ವ್ಯವಸ್ಥೆ ಬಲಗೊಂಡಿದೆ ಎಂದು ಹೇಳಿದ ಅವರು, ಕಳೆದ 12 ವರ್ಷಗಳಲ್ಲಿ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಹಾಗೂ 94 ಕೋಟಿಗೂ ಹೆಚ್ಚು ಜನರು ಸಾಮಾಜಿಕ ಭದ್ರತೆಯ ವ್ಯಾಪ್ತಿಗೆ ಬಂದಿದ್ದಾರೆ ಎಂದು ಪ್ರತಿಪಾದಿಸಿದರು. ಭಾರತದ ಆರ್ಥಿಕತೆ ಶೇ.7.8ರ ಬೆಳವಣಿಗೆ ದರದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ರಕ್ಷಣಾ ಕ್ಷೇತ್ರದಲ್ಲಿನ ಬದಲಾವಣೆಗಳನ್ನೂ ಪ್ರಸ್ತಾಪಿಸಿದ ರಾಜನಾಥ್ ಸಿಂಗ್, 40ಕ್ಕೂ ಹೆಚ್ಚು ಶಸ್ತ್ರಾಸ್ತ್ರ ಕಾರ್ಖಾನೆಗಳನ್ನು ಪುನರ್‌ರಚಿಸಿ ಏಳು ರಕ್ಷಣಾ ಸಾರ್ವಜನಿಕ ವಲಯದ ಉದ್ದಿಮೆಗಳಾಗಿ ರೂಪಿಸಲಾಗಿದೆ ಎಂದರು. 2014ಕ್ಕೆ ಹೋಲಿಸಿದರೆ ರಕ್ಷಣಾ ಉತ್ಪಾದನೆ ಸುಮಾರು ನಾಲ್ಕು ಪಟ್ಟು ಹೆಚ್ಚಾಗಿ ₹1.80 ಲಕ್ಷ ಕೋಟಿಯ ಮಟ್ಟ ತಲುಪಿದೆ. ರಕ್ಷಣಾ ರಫ್ತು 56 ಪಟ್ಟು ಹೆಚ್ಚಾಗಿದ್ದು, ಭಾರತ ಈಗ 100ಕ್ಕೂ ಹೆಚ್ಚು ದೇಶಗಳಿಗೆ ರಕ್ಷಣಾ ಉಪಕರಣಗಳನ್ನು ರಫ್ತು ಮಾಡುತ್ತಿದೆ ಎಂದು ಹೇಳಿದರು.

ಈ ವರ್ಷದ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯಲ್ಲಿ ನಡೆದ ‘ವಂದೇ ಮಾತರಂ’ ಸಾಮೂಹಿಕ ಗಾಯನವನ್ನು ಉಲ್ಲೇಖಿಸಿದ ರಾಜನಾಥ್ ಸಿಂಗ್, ಇದು ಪಶ್ಚಿಮ ಬಂಗಾಳದ ಸಾಂಸ್ಕೃತಿಕ ಪರಂಪರೆಗೆ ನೀಡಿದ ಗೌರವವಾಗಿದೆ ಎಂದು ಹೇಳಿದರು. 2026ರಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ರಚನೆಯ 150 ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅದಕ್ಕೆ ವಿಶೇಷ ಸ್ಥಾನ ನೀಡಲಾಗಿತ್ತು ಎಂದು ತಿಳಿಸಿದರು.

ಪ್ರಧಾನಿ ಮೋದಿ ಅವರ ಜನ್ಮದಿನ ಹಾಗೂ ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಎನ್‌ಡಿಎ ಸಹಯೋಗಿ ಪಕ್ಷಗಳ ವತಿಯಿಂದ ‘ಸೇವೆಯಿಂದ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಸೆ.17ರಿಂದ ಆರಂಭಿಸಲು ಉದ್ದೇಶಿಸಿರುವ ಈ ಅಭಿಯಾನದಡಿ ದೇಶಾದ್ಯಂತ 12 ಪ್ರಮುಖ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಜನಸೇವೆ, ಸಾಮಾಜಿಕ ಕಲ್ಯಾಣ ಮತ್ತು ಜನರ ಭಾಗವಹಿಸುವಿಕೆಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿವೆ. ಫಲಾನುಭವಿಗಳ ಮನೆಗಳಲ್ಲಿ ದೀಪ ಬೆಳಗಿಸುವುದು, ಬೀದಿ ನಾಟಕಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುವುದು ಎಂದರು.

ಈ ಅಭಿಯಾನವು ಸರ್ಕಾರದ ಸಾಧನೆಗಳು ಮತ್ತು ಅಂಕಿ-ಅಂಶಗಳನ್ನು ಮಾತ್ರ ಮುಂದಿಡುವ ಕಾರ್ಯಕ್ರಮವಲ್ಲ. ರಾಷ್ಟ್ರ ನಿರ್ಮಾಣದಲ್ಲಿ ಜನರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಪ್ರಯತ್ನವೂ ಆಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು. ಇದು ಒಬ್ಬ ವ್ಯಕ್ತಿಯ ಸಾರ್ವಜನಿಕ ಬದುಕಿನ ಕಥೆಯಷ್ಟೇ ಅಲ್ಲ, ‘ಹೊಸ ಭಾರತದ’ ಕಥೆಯೂ ಆಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಪಶ್ಚಿಮ ಬಂಗಾಳದ ಕುರಿತು ಮಾತನಾಡಿದ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಶುಭೇಂದು ಅಧಿಕಾರಿ ಅವರ ಮಾರ್ಗದರ್ಶನದಲ್ಲಿ ರಾಜ್ಯವು ‘ವಿಕಸಿತ ಭಾರತ’ ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ದೇಶ ಪ್ರಗತಿ, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯ ದಿಕ್ಕಿನಲ್ಲಿ ಮುನ್ನಡೆಯುತ್ತಿದೆ ಎಂದು ಹೇಳಿದರು.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande