
ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ಬಳಿಕ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ರಾಜ್ಯದಾದ್ಯಂತ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲಿರುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಮುಂದುವರಿಯುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.