ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಪೂರ್ತಿ ಹಾಡಲಿ; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು
ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು
ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಪೂರ್ತಿ ಹಾಡಲಿ; ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಸವಾಲು


ಬೆಂಗಳೂರು, 16 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಟೆಲಿಪ್ರಾಂಪ್ಟರ್ ಬಳಸದೆ ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಲಿ. ಹಾಗೆ ಹಾಡಿದರೆ ತಾವು ರಾಜೀನಾಮೆ ನೀಡುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ಕಾಂಗ್ರೆಸ್ನ ನಿರ್ಧಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿದರು. 1937ರಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್, ಜವಾಹರಲಾಲ್ ನೆಹರೂ, ಸುಭಾಷ್ ಚಂದ್ರ ಬೋಸ್ ಹಾಗೂ ರವೀಂದ್ರನಾಥ ಟ್ಯಾಗೋರ್ ಸೇರಿದಂತೆ ನಾಯಕರ ಚರ್ಚೆಯ ಬಳಿಕ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದರು.

“ಬಿಜೆಪಿಯವರು ‘ವಂದೇ ಮಾತರಂ’ ಗೀತೆಯನ್ನು ಸಂಪೂರ್ಣವಾಗಿ ಹಾಡಲಿ. ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ಸಂಪುಟದವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೆ ಸಂಪೂರ್ಣ ಗೀತೆಯನ್ನು ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬಿಜೆಪಿ ಮತ್ತು ಆರ್ಎಸ್ಎಸ್ಗೆ ದೇಶಭಕ್ತಿಯ ಬಗ್ಗೆ ಮಾತನಾಡುವ ನೈತಿಕ ಹಕ್ಕಿನ ಕುರಿತು ಪ್ರಶ್ನಿಸಿದ ಅವರು, ಆರ್ಎಸ್ಎಸ್ ಶಾಖೆಗಳಲ್ಲಿ ‘ನಮಸ್ತೇ ಸದಾ ವತ್ಸಲೇ’ ಬದಲಿಗೆ ‘ವಂದೇ ಮಾತರಂ’ ಹಾಡುವಂತೆ ಹೇಳಲಿ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗಳು ಹಾಗೂ ವಿವಿಧ ಪ್ರತಿಭಟನೆಗಳಂತಹ ವಿಚಾರಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ‘ವಂದೇ ಮಾತರಂ’ ವಿವಾದವನ್ನು ಮುನ್ನೆಲೆಗೆ ತರಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande