ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯ
ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಅಂದಿನ ಕಾನೂನು ಸಚಿವರಾಗಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ ಅಚಲ ಇಚ್ಛಾಶಕ್ತಿಯ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೆಪ್ಟೆಂಬರ್ 17, 1948 ರಂದು ನಿಜಾಮರ ಕಪಿಮುಷ್ಠಿಯಿಂದ ವಿಮೋಚನೆ ದೊರೆಯಿತು ಎಂದು ವಿವಿಯ
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯ


ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯ


ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯ


ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಅಂದಿನ ಕಾನೂನು ಸಚಿವರಾಗಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ ಅಚಲ ಇಚ್ಛಾಶಕ್ತಿಯ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸೆಪ್ಟೆಂಬರ್ 17, 1948 ರಂದು ನಿಜಾಮರ ಕಪಿಮುಷ್ಠಿಯಿಂದ ವಿಮೋಚನೆ ದೊರೆಯಿತು ಎಂದು ವಿವಿಯ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಕಲ್ಯಾಣ ಕರ್ನಾಟಕ ರಚನಾ ಸಮಿತಿಯ ಸದಸ್ಯರಾದ ಡಾ. ರಾಜೇಂದ್ರ ಪ್ರಸಾದ್ ಎನ್. ಎಲ್. ಸ್ಮರಿಸಿದರು.

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕಲ್ಯಾಣ-ಕರ್ನಾಟಕ ಉತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಗಣ್ಯರೊಂದಿಗೆ ಧ್ವಜಾರೋಹಣ ನೆರವೇರಿಸಿ, ಪಟೇಲ್ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.

ಹೈದ್ರಾಬಾದ್ ನಿಜಾಮರ ಆಳ್ವಿಕೆಯಲ್ಲಿದ್ದ ಈ ಭಾಗವನ್ನು ಪಟೇಲರು ತಮ್ಮ ಚಾಣಾಕ್ಷ ನಡತೆ ಮತ್ತು ರಾಜತಾಂತ್ರಿಕತೆಯಿಂದ ಮುಕ್ತಿಗೊಳಿಸಿದರು. ಆದರೆ ಇಂದಿಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಇವುಗಳನ್ನು ನಿವಾರಿಸಲು ಕಲ್ಯಾಣ ಕರ್ನಾಟಕ ರಚನಾ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದೆ. ಲಭ್ಯವಿರುವ ಅನುದಾನಗಳ ಸಮರ್ಪಕ ಹಂಚಿಕೆ ಹಾಗೂ ಸದ್ಬಳಕೆ ಕುರಿತಂತೆ ಸರ್ಕಾರಕ್ಕೆ ಸಮಿತಿಯು ಕಾಲಕಾಲಕ್ಕೆ ಸೂಕ್ತ ವರದಿ ನೀಡುತ್ತಾ ಬಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿವಿಯ ಕುಲಪತಿ ಪ್ರೊ. ಎಂ. ಮುನಿರಾಜು ಅವರು, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಇಂದಿಗೂ ಗುಣಮಟ್ಟದ ಕೌಶಲ್ಯಯುತ ಕಲಿಕೆಯಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನಲೆಯನ್ನು ಬದಲಾಯಿಸಲು ಪ್ರತಿಯೊಬ್ಬ ಶಿಕ್ಷಕರೂ ಶ್ರದ್ಧೆ, ಭಕ್ತಿ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳ ಸರ್ವತೋಮುಖ ಕಲ್ಯಾಣಕ್ಕೆ ಮುನ್ನುಡಿ ಬರೆಯಬೇಕು ಎಂದು ಕರೆ ನೀಡಿದರು.

ವಿಶ್ವವಿದ್ಯಾಲಯದ ಭವಿಷ್ಯದ ಯೋಜನೆಗಳನ್ನು ಹಂಚಿಕೊಂಡ ಅವರು, ವಿವಿ ಆವರಣದಲ್ಲಿ ಎಐ ಲ್ಯಾಬ್, ದಾಸೋಹ ಭವನ, ಕೆಎಎಸ್-ಐಎಎಸ್ ತರಬೇತಿ ಕೇಂದ್ರ, ಬಯೋ-ಇನ್ನೋವೇಶನ್ ಕೇಂದ್ರ ಹಾಗೂ ಸುಸಜ್ಜಿತ ಕ್ರೀಡಾ ಮೈದಾನ ನಿರ್ಮಾಣ ಸೇರಿದಂತೆ ಹತ್ತು-ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ರೂಪಿಸಲಾಗಿದ್ದು, ಇವುಗಳನ್ನು ಶೀಘ್ರ ಕಾರ್ಯರೂಪಕ್ಕೆ ತರುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು.

ಜೊತೆಗೆ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ವಿವಿಯನ್ನು ಮತ್ತಷ್ಟು ಸದೃಢಗೊಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ವೇದಿಕೆಯಲ್ಲಿ ವಿವಿಯ ಕುಲಸಚಿವ ಪ್ರೊ. ವಿ. ಲೋಕೇಶ್, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ಎಂ.ಸಾಲಿ ಹಾಗೂ ವಿತ್ತಾಧಿಕಾರಿ ಸ್ಪೂರ್ತಿ ಕೆ. ಜಿ. ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕರಾದ ಡಾ. ಶಶಿಧರ್ ಸ್ವಾಗತಿಸಿ, ವಂದಿಸಿದರು. ರಮೇಶ್ ಕೆ. ಡಿ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ನಿಕಾಯಗಳ ಡೀನರು, ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande