₹8 ಲಕ್ಷ ಲಂಚ ಸ್ವೀಕರಿಸುವಾಗ ಜಿ ಎಸ್ ಟಿ ಅಧೀಕ್ಷಕ ಲೋಕಾಯುಕ್ತ ಬಲೆಗೆ
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ₹8 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಜಿ ಎಸ್ ಟಿ ಇಲಾಖೆಯ ಅಧೀಕ್ಷಕರಿಗೆ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ. ಬೆಂಗಳೂರಿನ ಜಿಎಸ್ಟಿ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆದಿದ್ದು, ಜಿ ಎಸ್ ಟಿ ಅಧೀಕ್ಷಕ ಮೋಹಿತ
GST-superintendent-caught-by-Lokayukta-while-accepting-Rs-8-lakh-bribe


ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

₹8 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇರೆಗೆ ಜಿ ಎಸ್ ಟಿ ಇಲಾಖೆಯ ಅಧೀಕ್ಷಕರಿಗೆ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಬೀಳಿಸಿದ್ದಾರೆ.

ಬೆಂಗಳೂರಿನ ಜಿಎಸ್ಟಿ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ಕಾರ್ಯಾಚರಣೆ ನಡೆದಿದ್ದು, ಜಿ ಎಸ್ ಟಿ ಅಧೀಕ್ಷಕ ಮೋಹಿತ್ ಪ್ರತಾಪ್ ಸಿಂಗ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.

ಜಿಯೋ ಟ್ರೇಡರ್ಸ ಹೆಸರಿನ ಕಬ್ಬಿಣದ ಅಂಗಡಿ ಮಾಲೀಕರಿಂದ ₹20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ₹8 ಲಕ್ಷಕ್ಕೆ ಒಪ್ಪಿಕೊಂಡು ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿದೆ.

ಸಾಮಾಜಿಕ ಹೋರಾಟಗಾರ ಸುಭಾಷ್ ಎಸ್. ಅವರ ನೇತೃತ್ವದಲ್ಲಿ ಅಂಗಡಿ ಮಾಲೀಕ ಜಮೀರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಎಸ್ಪಿ ಶಿವಕುಮಾರ್ ಹಾಗೂ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ಲೋಕಾಯುಕ್ತ ತಂಡ ಕಾರ್ಯಾಚರಣೆ ನಡೆಸಿದೆ.

ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದು, ಲಂಚದ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಇತರ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಸುಭಾಷ್ ಎಸ್., “ಕರ್ನಾಟಕ ರಾಜ್ಯ ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿ ದೇಶಕ್ಕೆ ಮಾದರಿಯಾಗಿದೆ. ಆದರೆ ತೆರಿಗೆ ಇಲಾಖೆಯ ಅಧಿಕಾರಿಗಳೇ ಲಂಚದ ಆರೋಪಕ್ಕೆ ಸಿಲುಕುತ್ತಿರುವುದು ಖಂಡನೀಯ, ಇಂತಹ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande