ಅಭಿವೃದ್ಧಿಯ ಸಂಕಲ್ಪದೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸೋಣ
ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಪಿತ ಮಹಾತ್ಮಾಗಾಂಧಿ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂ
ಅಭಿವೃದ್ಧಿಯ ಸಂಕಲ್ಪದೊಂದಿಗೆ ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸೋಣ


ಬಳ್ಳಾರಿ, 17 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ವನ್ನು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಪಿತ ಮಹಾತ್ಮಾಗಾಂಧಿ ಮತ್ತು ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯತು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅವ್ವಾರು ಮಂಜುನಾಥ್ ಅವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಬಳ್ಳಾರಿ ಜಿಲ್ಲೆಯು ತನ್ನದೇ ಆದ ಕೊಡುಗೆಯನ್ನು ನೀಡಿದೆ. ಬಳ್ಳಾರಿ ಜಿಲ್ಲೆಯ ಕೈಗಾರಿಕೆ, ವಾಣಿಜ್ಯ, ಕೃಷಿ ಹಾಗೂ ಉದ್ಯಮಶೀಲತೆಯ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುವ ಮೂಲಕ ಆರ್ಥಿಕ ಸದೃಢತೆಗೆ ಶ್ರಮಿಸುತ್ತಿದೆ ಎಂದರು.

ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ ಹಾಗೂ ಪಿ. ಪಾಲಣ್ಣ, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ಮಾಜಿ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ವಿ. ರವಿಕುಮಾರ, ಈವೆಂಟ್ಸ್ ಕಮಿಟಿ ಚೇರ್ಮೆನ್ ನೇಕಾರ ನಾಗರಾಜ್, ಪತ್ರಿಕಾ ಹಾಗೂ ಮಾಧ್ಯಮ ಕಮಿಟಿ ಚೇರ್ಮನ್ ಟಿ. ಶ್ರೀನಿವಾಸ್ ರಾವ್, ಐಟಿ ಕಮಿಟಿ ಚೇರ್ಮೆನ್ ಪಿ. ವೇಣುಗೋಪಾಲ ಗುಪ್ತ, ಆಜೀವ ಸದಸ್ಯರು, ವಿವಿಧ ಉಪಸಮಿತಿಗಳ ಚೇರ್ಮನ್ಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತರು ಹಾಗೂ ವಿಶೇಷ ಸಮನ್ವಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande