ಮೋದಿ ಜನ್ಮದಿನ: ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಜಯೇಂದ್ರ ವಿಶೇಷ ಪೂಜೆ
ಶಿವಮೊಗ್ಗ, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ವಕ್ಷೇತ್ರ ಶಿಕಾರಿಪುರದ ಅಧಿದೈವ, ಐತಿಹಾಸಿಕ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನ
ದೇವಸ್ಥಾನದಲ್ಲಿ ವಿಜಯೇಂದ್ರ ಪ್ರಾರ್ಥನೆ


ಶಿವಮೊಗ್ಗ, 17 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ನಿಮಿತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸ್ವಕ್ಷೇತ್ರ ಶಿಕಾರಿಪುರದ ಅಧಿದೈವ, ಐತಿಹಾಸಿಕ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಮುಖರು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ದೇವಸ್ಥಾನಕ್ಕೆ ತೆರಳಿದ ವಿಜಯೇಂದ್ರ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ಪ್ರಾರ್ಥಿಸಿದರು.

ನಿಸ್ವಾರ್ಥ ಸೇವೆಯ ಮೂಲಕ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಚ್ಚರಾಯಸ್ವಾಮಿಯು ಉತ್ತಮ ಆರೋಗ್ಯ, ಸುದೀರ್ಘಾಯುಷ್ಯ ಹಾಗೂ ದೇಶಸೇವೆಗೆ ಮತ್ತಷ್ಟು ಶಕ್ತಿ ಕರುಣಿಸಲಿ. ಮಾರುತಿಯ ಶ್ರೀರಕ್ಷೆ ಸದಾ ಅವರೊಂದಿಗೆ ಇರಲಿ ಎಂದು ಪ್ರಾರ್ಥಿಸಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande