ನರೇಂದ್ರ ಮೋದಿ ಜನ್ಮದಿನ: ಅಶೋಕ, ವಿಜಯೇಂದ್ರ, ಯಡಿಯೂರಪ್ಪ ಶುಭಾಶಯ
ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಕ್ಸ್‌ನಲ್ಲಿ ಶುಭಾಶಯ ಕೋರಿದ್ದಾರೆ. ಪ್ರತಿಪಕ್ಷ ನ
ಯಡಿಯೂರಪ್ಪ ಎಕ್ಸ್ ಪೋಸ್ಟ್


ಅಶೋಕ ಎಕ್ಸ್ ಪೋಸ್ಟ್


ಬೆಂಗಳೂರು, 17 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಕ್ಸ್‌ನಲ್ಲಿ ಶುಭಾಶಯ ಕೋರಿದ್ದಾರೆ.

ಪ್ರತಿಪಕ್ಷ ನಾಯಕ ಆರ್. ಅಶೋಕ ಅವರು, ನವ ಭಾರತದ ನಿರ್ಮಾತೃ ಹಾಗೂ ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ದೇಶವನ್ನು ಸರ್ವಾಂಗೀಣ ಅಭಿವೃದ್ಧಿಯತ್ತ ಮುನ್ನಡೆಸುತ್ತಿರುವ ಮೋದಿಯವರಿಗೆ ತಾಯಿ ಭಾರತೀಯ ಸೇವೆ ಮಾಡಲು ಚಾಮುಂಡೇಶ್ವರಿ ತಾಯಿ ಆಯುರಾರೋಗ್ಯ ಹಾಗೂ ದೀರ್ಘಾಯುಷ್ಯ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಅವರು, ಭಾರತಾಂಬೆಯ 140 ಕೋಟಿ ಮಕ್ಕಳ ಸೇವೆಗೆ ಕಟಿಬದ್ಧರಾಗಿ, ಒಂದು ದಿನವೂ ವಿರಮಿಸದೆ ನಿರಂತರ ಶ್ರಮಿಸುತ್ತಿರುವ ಮೋದಿ ಅವರು ‘ವಿಕಸಿತ ಭಾರತ’ದ ಸಂಕಲ್ಪದೊಂದಿಗೆ ದೇಶವನ್ನು ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. ವಿಶ್ವದಾದ್ಯಂತ ಭಾರತದ ಹಿರಿಮೆ-ಗರಿಮೆಗಳನ್ನು ಹೆಚ್ಚಿಸಿರುವ ಪ್ರಧಾನಮಂತ್ರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಮೋದಿಯವರ ಅವಿಶ್ರಾಂತ ಕಠಿಣ ಪರಿಶ್ರಮ, ತಪಸ್ವಿ ಶಿಸ್ತು ಹಾಗೂ ದೇಶದ ಮೇಲಿನ ಅಚಲ ಭಕ್ತಿ ಪಕ್ಷದ ಕೋಟ್ಯಂತರ ಕಾರ್ಯಕರ್ತರು ಮತ್ತು ಪ್ರತಿಯೊಬ್ಬ ಭಾರತೀಯನಿಗೆ ನಿರಂತರ ಸ್ಫೂರ್ತಿಯ ಸೆಲೆಯಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಅವರಿಗೆ ಉತ್ತಮ ಆರೋಗ್ಯ, ಸುದೀರ್ಘಾಯುಷ್ಯ ಹಾಗೂ ಜನಸೇವೆ ಮುಂದುವರಿಸಲು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸೇವೆ, ಸಾಧನೆ ಮತ್ತು ಸಮರ್ಪಣೆಗಳ 25 ವರ್ಷಗಳ ಸಾರ್ಥಕ ಸಾರ್ವಜನಿಕ ಜೀವನದಲ್ಲಿ ರಾಷ್ಟ್ರಸೇವೆಯೇ ಉಸಿರು, ಭಾರತವೇ ಮೊದಲು ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande