
ಬೆಂಗಳೂರು, 18 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇಗೆ ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಹೆಸರಿಡಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಎಕ್ಸ್ಪ್ರೆಸ್ವೇಗೆ ಅವರ ಹೆಸರು ನಾಮಕರಣ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಬೆಂಗಳೂರು–ಮೈಸೂರು ನಡುವಿನ ಸಂಪರ್ಕವನ್ನು ಮತ್ತಷ್ಟು ಸುಗಮಗೊಳಿಸಿರುವ ಪ್ರಮುಖ ಹೆದ್ದಾರಿಗೆ ಸಮಾಜ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಹೆಸರು ಇಡುವುದರಿಂದ ಅವರ ಸೇವೆಯನ್ನು ಸ್ಮರಿಸಿದಂತಾಗಲಿದೆ ಎಂದು ಮನವಿದಾರರು ಅಭಿಪ್ರಾಯಪಟ್ಟಿದ್ದಾರೆ.
“ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಶಿಕ್ಷಣ ಮತ್ತು ಸಮಾಜ ಸೇವೆಯ ಮೂಲಕ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ವೇಗೆ ಅವರ ಹೆಸರಿಡಬೇಕು” ಎಂದು ಒತ್ತಾಯಿಸಲಾಗಿದೆ.
--------------
ಹಿಂದೂಸ್ತಾನ್ ಸಮಾಚಾರ್ / BHARGAVI G R