ನಾಳೆ ಬಳ್ಳಾರಿ ಜಿಲ್ಲೆಯಾದ್ಯಂತ ಲೋಕ್ ಅದಾಲತ್
ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ರಾಷ್ಟಿಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಸೆ.19 ರಂದು ಬಳ್ಳಾರಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟಿಯ ಲೋಕ್ ಅದಾಲತ
ಸೆ.19 ರಂದು ಬಳ್ಳಾರಿ ಜಿಲ್ಲೆಯಾದ್ಯಂತ ಲೋಕ್ ಅದಾಲತ್


ಬಳ್ಳಾರಿ, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ರಾಷ್ಟಿಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಇವರ ಸಂಯುಕ್ತ ಆಶ್ರಯದಲ್ಲಿ ಸೆ.19 ರಂದು ಬಳ್ಳಾರಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟಿಯ ಲೋಕ್ ಅದಾಲತ್’ ನ್ನು ಹಮ್ಮಿಕೊಳ್ಳಲಾಗಿದೆ.

ಈ ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪರಸ್ಪರ ರಾಜಿಸಂಧಾನದ ಮೂಲಕ ಶೀಘ್ರವಾಗಿ ಮತ್ತು ಉಚಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಉತ್ತಮ ಅವಕಾಶ ಕಲ್ಪಿಸಲಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳು, ರಾಜಿ ಮಾಡಿಕೊಳ್ಳಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯ (ಬೌನ್ಸ್) ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ನ್ಯಾಯಾಧಿಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಕಲಹಗಳು, ಸಿವಿಲ್ ದಾವೆಗಳು ಮತ್ತು ಇತರೆ ರಾಜಿಯಾಗಬಲ್ಲ ವ್ಯಾಜ್ಯಗಳು ಇತ್ಯರ್ಥಪಡಿಸಿಕೊಳ್ಳಬಹುದಾದ ಪ್ರಕರಣಗಳಾಗಿವೆ.

ನ್ಯಾಯಾಲಯದ ಅಲೆದಾಟ, ಸಮಯ ಮತ್ತು ಹಣದ ವ್ಯಯವನ್ನು ತಪ್ಪಿಸಿ, ಸಾಮರಸ್ಯದೊಂದಿಗೆ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರು, ಕಕ್ಷಿದಾರರು ಈ ರಾಷ್ಟಿಯ ಲೋಕ್ ಅದಾಲತ್ನ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಸಿದ್ಧಲಿಂಗ ಪ್ರಭು ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande