ನಾಳೆ ಪರಿಸರ ಮತ್ತು ಹವಾಮಾನ ಚಲನಶೀಲತೆಯ ಭವಿಷ್ಯದ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಜ್ಞಾನ ಭವನದಲ್ಲಿ ‘ಪರಿಸರ ಮತ್ತು ಹವಾಮಾನ ಚಲನಶೀಲತೆಯ ಭವಿಷ್ಯ’ ವಿಷಯದ ಕುರಿತು ನಡೆಯಲಿರುವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ವತಿಯಿಂದ ಸೆ.19 ಮ
प्रधानमंत्री नरेन्द्र मोदी गुरुवार को वीडियो कॉन्फ्रेंस के माध्यम से संबोधित करते हुए


ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಜ್ಞಾನ ಭವನದಲ್ಲಿ ‘ಪರಿಸರ ಮತ್ತು ಹವಾಮಾನ ಚಲನಶೀಲತೆಯ ಭವಿಷ್ಯ’ ವಿಷಯದ ಕುರಿತು ನಡೆಯಲಿರುವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ವತಿಯಿಂದ ಸೆ.19 ಮತ್ತು 20ರಂದು ಎರಡು ದಿನಗಳ ಕಾಲ ಸಮ್ಮೇಳನ ಆಯೋಜಿಸಲಾಗಿದೆ.

ಪ್ರಧಾನಿ ಕಚೇರಿ ಪ್ರಕಾರ, ಸಮ್ಮೇಳನದಲ್ಲಿ ಪರಿಸರ ಮತ್ತು ಹವಾಮಾನಕ್ಕೆ ಸಂಬಂಧಿಸಿದ ಪ್ರಮುಖ ಸವಾಲುಗಳ ಕುರಿತು ಚರ್ಚೆ ನಡೆಯಲಿದ್ದು, ಪರಿಸರ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ.

ಭಾರತದ ಉಚ್ಚತಮ ನ್ಯಾಯಾಲಯ ಹಾಗೂ ವಿವಿಧ ಉಚ್ಚ ನ್ಯಾಯಾಲಯಗಳ ನ್ಯಾಯಮೂರ್ತಿಗಳು, ಜಿಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು, ವಿವಿಧ ಸಚಿವಾಲಯಗಳ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು, ಪರಿಸರ ತಜ್ಞರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

17 ದೇಶಗಳ ಪ್ರತಿಷ್ಠಿತ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಂಗ ಪ್ರತಿನಿಧಿಗಳೂ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ನ್ಯಾಯಾಂಗ ಅಕಾಡೆಮಿಗಳು, ರಾಜ್ಯ ಕಾನೂನು ಸೇವಾ ಪ್ರಾಧಿಕಾರಗಳು, ರಾಜ್ಯ ತಜ್ಞರ ಮೌಲ್ಯಮಾಪನ ಸಮಿತಿಗಳು, ರಾಜ್ಯ ಪರಿಸರ ಪರಿಣಾಮ ಮೌಲ್ಯಮಾಪನ ಪ್ರಾಧಿಕಾರಗಳು ಹಾಗೂ ರಾಜ್ಯ ಜಲಾವರಣ ಪ್ರದೇಶಗಳ ಪ್ರಾಧಿಕಾರಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ವಿವಿಧ ದೇಶಗಳು ಮತ್ತು ಸಂಸ್ಥೆಗಳ ನಡುವೆ ನ್ಯಾಯಾಂಗದ ದೃಷ್ಟಿಕೋನ, ವೈಜ್ಞಾನಿಕ ಜ್ಞಾನ, ಪರಿಸರ ಆಡಳಿತದ ಪ್ರಕ್ರಿಯೆಗಳು ಹಾಗೂ ಸಾಂಸ್ಥಿಕ ಅನುಭವಗಳ ವಿನಿಮಯಕ್ಕೂ ಸಮ್ಮೇಳನ ವೇದಿಕೆಯಾಗಲಿದೆ. ಅಲ್ಲದೆ, ನೀತಿ ರೂಪಣೆ, ಅನುಷ್ಠಾನ ಮತ್ತು ಜಾರಿಯಲ್ಲಿರುವ ಕೊರತೆಗಳು ಹಾಗೂ ಪರಿಸರ ಮತ್ತು ಹವಾಮಾನ ಸಂಬಂಧಿತ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ.

ಪರಿಸರ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವುದು ಹಾಗೂ ವಿವಿಧ ಸಂಸ್ಥೆಗಳ ನಡುವಿನ ಸಹಕಾರವನ್ನು ಬಲಪಡಿಸುವ ಮಾರ್ಗಗಳನ್ನು ಕಂಡುಕೊಳ್ಳುವುದು ಸಮ್ಮೇಳನದ ಪ್ರಮುಖ ಉದ್ದೇಶವಾಗಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande