
ಮಂಗಳೂರು, 18 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಾರಾಗೃಹದ ಆವರಣದಲ್ಲಿ ಮೊಬೈಲ್ ಸಿಗ್ನಲ್ ಜಾಮರ್‌ಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಈ ವ್ಯತ್ಯಯ ಉಂಟಾಗುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಜಂಟಿ ತಾಂತ್ರಿಕ ಸಮೀಕ್ಷೆ ನಡೆಸಲಾಗಿದ್ದು, ಅದರ ಆಧಾರದ ಮೇಲೆ ಸಂಬಂಧಪಟ್ಟ ಸಂಸ್ಥೆಯು ಆಂಟೆನಾಗಳ ವಿನ್ಯಾಸ ಹಾಗೂ ಜಾಮರ್‌ಗಳ ಸಾಮರ್ಥ್ಯವನ್ನು ಅಗತ್ಯಕ್ಕೆ ಅನುಗುಣವಾಗಿ ಸರಿಹೊಂದಿಸುವ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಕಾರಾಗೃಹದೊಳಗೆ ಜಾಮರ್‌ಗಳು ತಮ್ಮ ಉದ್ದೇಶಿತ ಭದ್ರತಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವುದರ ಜೊತೆಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ಸಂಪರ್ಕಕ್ಕೆ ಉಂಟಾಗುವ ಅನಗತ್ಯ ವ್ಯತ್ಯಯವನ್ನು ತಗ್ಗಿಸುವ ನಿಟ್ಟಿನಲ್ಲಿ ಟೆಲಿಕಾಂ ಸೇವಾ ಪೂರೈಕೆದಾರರೊಂದಿಗೆ ಸಮನ್ವಯ ಸಾಧಿಸಿ ಮತ್ತಷ್ಟು ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಸಾಮಾಜಿಕ ಮಾಧ್ಯಮದ ಮೂಲಕ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.