ಕುರುಗೋಡು : ಬಾದನಹಟ್ಟಿಯಲ್ಲಿ ಸೆ.19 ರಂದು ಪ್ರಜಾಸೇವೆ ಆಂದೋಲನ
ಕುರುಗೋಡು, 18 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಹೋಬಳಿಯ ಬಾದನಹಟ್ಟಿ ಗ್ರಾಮ ಪಂಚಾಯಿತ
ಕುರುಗೋಡು : ಬಾದನಹಟ್ಟಿಯಲ್ಲಿ ಸೆ.19 ರಂದು ಪ್ರಜಾಸೇವೆ ಆಂದೋಲನ


ಕುರುಗೋಡು, 18 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ‘ಪ್ರಜಾಸೇವೆ ಆಂದೋಲನ’ ಸಭೆಯನ್ನು ಸೆಪ್ಟೆಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಕುರುಗೋಡು ಹೋಬಳಿಯ ಬಾದನಹಟ್ಟಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಮುಂಭಾಗದ ಉಡುಸಲಮ್ಮದೇವಿ ದೇವಸ್ಥಾನದ ಬಯಲು ಆವರಣದಲ್ಲಿ ಆಯೋಜಿಸಲಾಗಿದೆ.

ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಶನಿವಾರಗಳಂದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಇಂತಹ ಸಭೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ಸಭೆಯಲ್ಲಿ ಕುರುಗೋಡು ತಾಲೂಕಿನ ಸಮಸ್ತ ಸಾರ್ವಜನಿಕರು ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕುರುಗೋಡು ತಹಶೀಲ್ದಾರರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande