ನಾಳೆ 20ನೇ ಉದ್ಯೋಗ ಮೇಳ: 51 ಸಾವಿರಕ್ಕೂ ಹೆಚ್ಚು ಯುವಕರಿಗೆ ಪ್ರಧಾನಿ ನೇಮಕಾತಿ ಪತ್ರ ವಿತರಣೆ
ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ನಡೆಯಲಿರುವ 20ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ನೂತನವಾಗಿ ನೇಮಕಗೊಂಡಿರುವ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ವಿಡಿ
प्रधानमंत्री नरेन्द्र मोदी मंगलवार को मुंबई में ग्लोबल फिनटेक फेस्ट (जीएफएफ) 2026 को संबोधित करते हुए


ನವದೆಹಲಿ, 18 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ನಡೆಯಲಿರುವ 20ನೇ ಉದ್ಯೋಗ ಮೇಳದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ನೂತನವಾಗಿ ನೇಮಕಗೊಂಡಿರುವ 51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ವಿಡಿಯೊ ಸಂವಾದದ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸುವ ಪ್ರಧಾನಿ, ಬಳಿಕ ನೂತನವಾಗಿ ನೇಮಕಗೊಂಡ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ದೇಶಾದ್ಯಂತ 45 ಸ್ಥಳಗಳಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ನೇಮಕಗೊಂಡ ಯುವಕರು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಕರ್ತವ್ಯಕ್ಕೆ ಸೇರ್ಪಡೆಯಾಗಲಿದ್ದಾರೆ. ಕಂದಾಯ ಇಲಾಖೆ, ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಹಾಗೂ ರಕ್ಷಣಾ ಸಚಿವಾಲಯ ಸೇರಿದಂತೆ ವಿವಿಧ ಇಲಾಖೆಗಳು ಇದರಲ್ಲಿ ಸೇರಿವೆ.

ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ದೇಶದ ಅಭಿವೃದ್ಧಿಯಲ್ಲಿ ಅವರ ಹೆಚ್ಚಿನ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡುವ ನಿರಂತರ ಪ್ರಯತ್ನದ ಭಾಗವಾಗಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ.

20ನೇ ಉದ್ಯೋಗ ಮೇಳದೊಂದಿಗೆ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಇದುವರೆಗೆ ಸುಮಾರು 12.75 ಲಕ್ಷ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದಂತಾಗಲಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande