ಸೋಮವಾರ ಜಗಳೂರು ಬಂದ್ ಗೆ ಬಿಜೆಪಿ ಕರೆ
ದಾವಣಗೆರೆ, 19 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಜಗಳೂರು ತಾಲ್ಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಸೋಮವಾರ ಜಗಳೂರು ಬಂದ್ಗೆ ಬಿಜೆಪಿ ಕರೆ ನೀಡಿದೆ. ಜಗಳೂರು ತಾಲ್ಲೂಕಿನ ಅನ್ನದಾತರಿಗೆ ಅನ್ಯಾಯವಾಗಿ
Jagaluru-Bandh-Called-By-BJP-Protesting-Drought-Relief-Exclusion-And-Bhadra-Upper-Project-Delay


ದಾವಣಗೆರೆ, 19 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಜಗಳೂರು ತಾಲ್ಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಸೋಮವಾರ ಜಗಳೂರು ಬಂದ್ಗೆ ಬಿಜೆಪಿ ಕರೆ ನೀಡಿದೆ.

ಜಗಳೂರು ತಾಲ್ಲೂಕಿನ ಅನ್ನದಾತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮುಖಂಡರು, ರೈತರ ಹಕ್ಕು ಹಾಗೂ ಜಗಳೂರಿನ ನ್ಯಾಯಕ್ಕಾಗಿ ಶಾಂತಿಯುತ ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ತಾಲ್ಲೂಕಿಗೆ ನ್ಯಾಯ ದೊರೆಯುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಜಗಳೂರಿನ ಮಾಜಿ ಶಾಸಕರಾದ ಹೆಚ್.ಪಿ. ರಾಜೇಶ್ ಹಾಗೂ ಎಸ್.ವಿ. ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಬಂದ್ಗೆ ಕರೆ ನೀಡಲಾಗಿದೆ. ಬಂದ್ಗೆ ವ್ಯಾಪಾರಸ್ಥರು ಹಾಗೂ ವರ್ತಕರು ಸಹಕರಿಸುವಂತೆ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.

ಈ ಹೋರಾಟದಲ್ಲಿ ಬಿಜೆಪಿ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ಹಿರಿಯ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.

“ಜಗಳೂರು ತಾಲ್ಲೂಕನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿರುವುದರಿಂದ ರೈತರಿಗೆ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ವಿಳಂಬದಿಂದಲೂ ತಾಲ್ಲೂಕಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಜಗಳೂರಿಗೆ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ. ಸೋಮವಾರದ ಬಂದ್ಗೆ ವ್ಯಾಪಾರಸ್ಥರು, ವರ್ತಕರು ಹಾಗೂ ಸಾರ್ವಜನಿಕರು ಶಾಂತಿಯುತವಾಗಿ ಸಹಕರಿಸಬೇಕು” ಎಂದು ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande