ಹುಬ್ಬಳ್ಳಿಯಲ್ಲಿ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು; ಹೋಟೆಲ್ನಲ್ಲೇ ಚಿಕಿತ್ಸೆ, ಇಂದಿನ ಕಾರ್ಯಕ್ರಮಗಳು ರದ್ದು
ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಹೋಟೆಲ್‌ನಲ್ಲೇ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆರೋಗ್ಯದಲ್ಲಿ
ಇಂದು ಬೆಳ್ಳಿಗ್ಗೆ ಖಾಸಗಿ ಹೊಟೆಲ್ ನಲ್ಲಿ ಅಮಿತ್ ಶಾ ಭೇಟಿ ವಿಜಯೇಂದ್ರ ಪೋಟೋ


ಹುಬ್ಬಳ್ಳಿ, 19 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ವೇಳೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಹೋಟೆಲ್‌ನಲ್ಲೇ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರೊಂದಿಗೆ ಆಗಮಿಸಿರುವ ವೈದ್ಯರ ತಂಡ ಹೋಟೆಲ್‌ನಲ್ಲೇ ಚಿಕಿತ್ಸೆ ನೀಡುತ್ತಿದೆ. ಸುಮಾರು ಎರಡು ಗಂಟೆಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭುವನೇಶ ಪಾಟೀಲ್ ಅವರು ಅಮಿತ್ ಶಾ ತಂಗಿರುವ ಖಾಸಗಿ ಹೋಟೆಲ್‌ಗೆ ಭೇಟಿ ನೀಡಿದ್ದಾರೆ.

ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆದ ಬಳಿಕ ಅಮಿತ್ ಶಾ ಅವರು ನೇರವಾಗಿ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಅಮಿತ್ ಶಾ ಅವರು ಶನಿವಾರ ಕೆಎಲ್‌ಇ ಸಂಸ್ಥೆಯ ನೂತನ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕ್ರಮ ನಿಗದಿಯಾಗಿತ್ತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande